ಬೆಂಗಳೂರು:ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ತುಮಕೂರು ಹಾಗೂ ಬೀದರ್ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: ಕೋಲಾರ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಒಟ್ಟು 513 ಅಂಗನಾಡಿಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅಂಗನಾಡಿ ಕಾರ್ಯಕರ್ತರು - 120
ಅಂಗನಾಡಿ ಸಹಾಯಕರು - 393
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.
ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಕೋಲಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಆನ್ಲೈನ್ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಮಾರ್ಚ್ 12ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಏಪ್ರಿಲ್ 19 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಚಾಮರಾಜನಗರ ಡಬ್ಲೂಸಿಡಿಯಲ್ಲಿ 3 ಹುದ್ದೆ:ಚಾಮರಾಜನಗದ ಜಿಲ್ಲಾ ಮಟ್ಟದಲ್ಲಿನ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಿಷನ್ ನಿರ್ದೇಶಕರು ಮತ್ತು ಜೆಂಡರ್ ಸ್ಪೆಷಲಿಸ್ಟ್ ಮತ್ತು ಸ್ಪೆಷಲಿಸ್ಟ್ ಇನ್ ಫೈನಾಲ್ಸಿಯಲ್ ಲಿಟ್ರಸಿ ಅಂಡ್ ಅಕೌಂಟ್ನಲ್ಲಿ ತಲಾ ಒಂದೊಂದು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಯು ಸಂಪೂರ್ಣ ಗುತ್ತಿಗೆ ಆಧರಿತ ಹುದ್ದೆಯಾಗಿದೆ. ಈ ಹುದ್ದೆಗೆ ಕ್ರಮವಾಗಿ 50 ಸಾವಿರ, 35 ಸಾವಿರ ಮತ್ತು 28 ಸಾವಿರ ವೇತನ ನಿಗದಿಸಲಾಗಿದೆ. ಈ ಹುದ್ದೆಗೆ ಜಿಲ್ಲಾಡಳಿತದ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅಂತಿಮ ದಿನ ಮಾರ್ಚ್ 26 ಆಗಿದೆ. ಹೆಚ್ಚಿನ ವಿವರ, ಅಧಿಕೃತ ಅಧಿಸೂಚನೆಗೆ chamrajnagar.nic.inಭೇಟಿ ನೀಡಿ.
ಇದನ್ನೂ ಓದಿ: ಕೆಪಿಎಸ್ಸಿ ನೇಮಕಾತಿ: 247 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ