ಚಿತ್ರದುರ್ಗ: 215 ಅಂಗನವಾಡಿ ಕಾರ್ಯಕರ್ತರು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ - WCD Recruitment in Chitradurga - WCD RECRUITMENT IN CHITRADURGA
ಸರ್ಕಾರಿ ಶಾಲೆಗಳಲ್ಲೇ ಎಲ್ ಕೆಜಿ ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್ 31 ಆಗಿದೆ
ಬೆಂಗಳೂರು: ಚಿತ್ರದುರ್ಗದಲ್ಲಿ 215 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಅಂಗನವಾಡಿಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ, ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ನಿಗದಿಯಾಗಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್ 31 ಆಗಿದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬಹುದು.
ಶಿವಮೊಗ್ಗದಲ್ಲೂ ಇವೆ ಅಂಗನವಾಡಿ ಉದ್ಯೋಗ;ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.