ಬೆಂಗಳೂರು:ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಬೆಳಗಾವಿ ತುಮಕೂರು ಹಾಗೂ ಬೀದರ್ನಲ್ಲಿ ನೇಮಕಾತಿ ನಡೆಯಲಿದೆ. ಹಾವೇರಿಯಲ್ಲಿ 152 ಹುದ್ದೆಗಳು ಖಾಲಿ ಇದ್ದು, ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಗಳ ವಿವರ: ಹಾವೇರಿ ಜಿಲ್ಲೆಯಲ್ಲಿ ಒಟ್ಟು 152 ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರಲ್ಲಿ,
- ಅಂಗನವಾಡಿ ಕಾರ್ಯಕರ್ತರು- 39
- ಅಂಗನವಾಡಿ ಸಹಾಯಕರು- 113
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು.
- ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅಲ್ಲಿಯ ನಿವಾಸಿಯಾಗಿರಬೇಕು.
ವಯೋಮಿತಿ: ಕನಿಷ್ಠ 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.