ಬೆಂಗಳೂರು: ವಿಜಯಪುರದಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 1,170 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಒಟ್ಟು 1,170 ಹುದ್ದೆಗಳು. ಈ ಪೈಕಿ ಅಂಗನವಾಡಿ ಕಾರ್ಯಕರ್ತರ ಹುದ್ದೆ- 313, ಅಂಗನವಾಡಿ ಸಹಾಯಕರ ಹುದ್ದೆ- 857.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಮುಗಿಸಿರಬೇಕು.
ವಯೋಮಿತಿ: 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 10ರಿಂದ ಆರಂಭವಾಗಿದ್ದು, ಕಡೇಯ ದಿನಾಂಕ ನವೆಂಬರ್ 9 ಆಗಿದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಿ.
ಚಿಕ್ಕಬಳ್ಳಾಪುರ- ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಲು ಅ.19 ಕಡೇಯ ದಿನಾಂಕ:ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 6ನೇ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 285 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕಡೇಯ ದಿನ. ಅಂಗನವಾಡಿ ಕಾರ್ಯಕರ್ತರು - 54, ಮಿನಿ ಅಂಗನವಾಡಿ ಕಾರ್ಯಕರ್ತೆಯರು - 14, ಅಂಗನವಾಡಿ ಸಹಾಯಕಿಯರು - 217 ಹುದ್ದೆಗಳಿವೆ. ಹೆಚ್ಚಿನ ಮಾಹಿತಿಗೆ http://karnemakaone.kar.nic.in/abcd/ ಅಥವಾ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನೂ ಇದೆ ಅವಕಾಶ