ಬೆಂಗಳೂರು: ಉಡುಪಿಯ ಕೊಚ್ಚಿನ್ ಶಿಪ್ಯಾರ್ಡ್ ನಿಯಮಿತದಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು ಪಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
- ಬೆಂಜ್ ಫಿಟ್ಟರ್/ ಡಿಸೇಲ್ ಮೆಕಾನಿಕ್ಸ್ - 5
- ಎಲೆಕ್ಟ್ರಿಷಿಯನ್ - 4
- ವೆಲ್ಡರ್ಸ್ - 1
- ಪ್ಲಂಬರ್ - 2
ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಮುಗಿಸಿ, ಐಟಿಐ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷವಾಗಿರಬೇಕು.
ಅಧಿಸೂಚನೆ (ಉಡುಪಿ ಕೊಚ್ಚಿನ್ ಶಿಪ್ಯಾರ್ಡ್) ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಮಾಸಿಕ 8,000 ರೂ.ಗಳ ಗೌರವಧನದೊಂದಿಗೆ ನೇಮಕ ಮಾಡಲಾಗುವುದು. ಅಭ್ಯರ್ಥಿಗಳುapprenticeshipindia.gov.in ಗೆ ನೋಂದಣಿ ಮಾಡಿಕೊಂಡಿರಬೇಕು.
ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ, ಸಹಿಯೊಂದಿಗೆ career@udupicsl.com ಈ ಮೇಲ್ ವಿಳಾಸಕ್ಕೆ ಸಲ್ಲಿಸಬೇಕು.
ಈ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಜನವರಿ 30 ಆಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cochinshipyard.in ಗೆ ಭೇಟಿ ನೀಡಿ.
ಎಂಆರ್ಪಿಎಲ್ನಲ್ಲಿ ಅಪ್ರೆಂಟಿಸ್ ಟ್ರೈನಿ ಹುದ್ದೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ನಲ್ಲಿ ಪದವೀಧರ ಮತ್ತು ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅಭ್ಯರ್ಥಿಗಳು ಈಗಾಗಲೇ ಕೇಂದ್ರ ಸರ್ಕಾರದ nats.education.gov.in/as ನೋಂದಣಿ ಮಾಡಿಕೊಂಡಿರಬೇಕು.
2020 ಮತ್ತು 2024ರ ಅವಧಿಯಲ್ಲಿ ಪದವಿ ಅಥವಾ ಡಿಪ್ಲೊಮಾ ಪಡೆದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಹರಾಗಿದ್ದಾರೆ. ಒಂದು ವರ್ಷದ ಅವಧಿಗೆ ಈ ಹುದ್ದೆಗೆ ಆಯ್ಕೆ ನಡೆಯಲಿದೆ.
ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಜನವರಿ 9ರಂದು ತುಮಕೂರಿನ ಸಿದ್ಧಗಂಗಾ ತಾಂತ್ರಿಕ ಸಂಸ್ಥೆ ಮತ್ತು ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ನಿಯಮಿತದಲ್ಲಿ ವಾಕ್ ಇನ್ ಸಂದರ್ಶನ ಇರಲಿದೆ.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು mrpl.co.in ಭೇಟಿ ನೀಡಿ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿವೀರ್ ಜಾಥ; ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ