ಕರ್ನಾಟಕ

karnataka

ETV Bharat / education-and-career

ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಅಪ್ರೆಂಟಿಸ್​ಶಿಪ್​ ಹುದ್ದೆಗೆ ಮರು ಅಧಿಸೂಚನೆ - Recruitment by central Bank Of india

ಒಂದು ವರ್ಷ ಅವಧಿಯ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Apprenticeship job Recruitment by central Bank Of india
ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ ನೇಮಕಾತಿ ((ಈಟಿವಿ ಭಾರತ್​))

By ETV Bharat Karnataka Team

Published : Jun 8, 2024, 1:19 PM IST

ಬೆಂಗಳೂರು: ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾದಿಂದ ದೇಶಾದ್ಯಂತ 3000 ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಮರು ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್​ಶಿಪ್​ ಅವಧಿ ಒಂದು ವರ್ಷ ಆಗಿರಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.

ಅಧಿಸೂಚನೆ (ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ)

ಹುದ್ದೆ ವಿವರ: ದೇಶದ ವಿವಿಧ ಜಿಲ್ಲೆಗಳಿಗೆ ನಿರ್ದಿಷ್ಟ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಅದರ ಅನುಸಾರ ಕರ್ನಾಟಕಕ್ಕೆ 110 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಏಪ್ರಿಲ್​ 1- 1996ರಿಂದ 31 ಮಾರ್ಚ್​ 2004ರ ನಡುವೆ ಜನಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ 400, ಪ.ಜಾ, ಪ.ಪಂ, ಮಹಿಳಾ ಅಭ್ಯರ್ಥಿಗಳಿಗೆ 600 ಮತ್ತು ಇತರ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ: ಆನ್​ಲೈನ್​ ಮೂಲಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುವುದು.

ಈ ಹುದ್ದೆಗೆ ಮರು ಅಧಿಸೂಚನೆ ಅನುಸಾರ ಅಭ್ಯರ್ಥಿಗಳು 6 ಜೂನ್​ನಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆ ದಿನಾಂಕ ಜೂನ್​ 17 ಆಗಿದೆ. ಈ ಹುದ್ದೆಗೆ ತಾತ್ಕಾಲಿಕ ಪರೀಕ್ಷೆ ಜೂನ್​ 23ರಂದು ನಡೆಯಲಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು centralbankofindia.co.in ಭೇಟಿ ನೀಡಿ.

ಐಬಿಪಿಎಸ್​ ನೇಮಕಾತಿ:ವಿವಿಧ ಪ್ರಾದೇಶಿಕ ಬ್ಯಾಂಕಿಂಗ್​ ವಲಯದಲ್ಲಿನ (RRB) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಇನ್ಸುಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್​ (IBPS) ಅಧಿಸೂಚನೆ ಹೊರಡಿಸಿದೆ. ಒಟ್ಟು 9,995 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 18 ಗರಿಷ್ಠ 40 ವರ್ಷ ವಯೋಮಾನದ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎರಡು ಹಂತದ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಜೂನ್​ 7ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆ ದಿನಾಂಕ ಜುಲೈ 27 ಆಗಿದೆ. ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುibps.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಅರ್ಹತೆ ಇದ್ದು ಕಷ್ಟಪಟ್ಟರೂ ನಿಮಿಷ್ಟದ ಕೆಲಸ ಸಿಗುತ್ತಿಲ್ವಾ; ಹಾಗಾದರೆ ಈ ಐದು ತಪ್ಪುಗಳನ್ನ ಸರಿ ಮಾಡಿಕೊಳ್ಳಿ

ABOUT THE AUTHOR

...view details