ಕರ್ನಾಟಕ

karnataka

ETV Bharat / education-and-career

ಕರ್ನಾಟಕ ವಿದ್ಯುತ್​ ನಿಗಮ ನಿಯಮಿತದಲ್ಲಿದೆ ಉದ್ಯೋಗಾವಕಾಶ

ಕರ್ನಾಟಕ ವಿದ್ಯುತ್​ ನಿಗಮ ನಿಯಮಿತದಿಂದ ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆ ಭರ್ತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

Assistant Legal Officer recruitment by KAPL
Assistant Legal Officer recruitment by KAPL

By ETV Bharat Karnataka Team

Published : Feb 17, 2024, 11:37 AM IST

ಬೆಂಗಳೂರು: ಕರ್ನಾಟಕ ವಿದ್ಯುತ್​ ನಿಗಮ ನಿಯಮಿತದಿಂದ ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು ಆರು ಹುದ್ದೆಗಳನ್ನು 2 ವರ್ಷದ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ

ಹುದ್ದೆ ವಿವರ: 6 ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಮೂರು ಅಥವಾ ಐದು ವರ್ಷಗಳ ಕಾನೂನು ಪದವಿಯನ್ನು ಶೇ 40ರ ಅಂಕದೊಂದಿಗೆ ಪಡೆದಿರಬೇಕು. ಅಭ್ಯರ್ಥಿಗಳು ವಕೀಲ ವೃತ್ತಿಯಲ್ಲಿ ಕನಿಷ್ಠ 5 ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ:40 ವರ್ಷದ ಮೇಲ್ಪಟ್ಟ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ: ಈ ಹುದ್ದೆಗೆ ಅಭ್ಯರ್ಥಿಗಳಿಗೆ 40, 000 ರೂ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ಈ ಹುದ್ದೆಗಳನ್ನು 2 ವರ್ಷಗಳ ಗುತ್ತಿಗೆ ಅವಧಿಗೆ ನೇಮಕ ಮಾಡಲಾಗುತ್ತಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆ ಮೇರೆಗೆ 1 ವರ್ಷ ವಿಸ್ತರಣೆ ಮಾಡಲಾಗುವುದು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ನಿಗಮದ ವೆಬ್​ಸೈಟ್​ನಲ್ಲಿ ಲಭ್ಯವಿರುವ ಅರ್ಜಿ ಸಮೂನೆ ಭರ್ತಿ ಮಾಡಿ, ವಿದ್ಯಾರ್ಹತೆ ಸೇರಿದಂತೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಈ kpclcontractapptappt@gmail.com ಇಮೇಲ್​ ವಿಳಾಸಕ್ಕೆ ಸಲ್ಲಿಸಬೇಕು.

ಈ ಹುದ್ದೆಗೆ ಅಭ್ಯರ್ಥಿಗಳು ಜನವರಿ 19ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 19 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು kpcl.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಶಿವಮೊಗ್ಗದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ:ಶಿವಮೊಗ್ಗ ಜಿಲ್ಲಾ ಪಂಜಾಯತ್​​ ವತಿಯಿಂದ 14 ಗ್ರಂಥಾಲಯ ಮತ್ತು ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಶಿಕಾರಿಪುರ, ಸೊರಬ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿವಮೊಗ್ಗ ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ. ಪಿಯುಸಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 35 ವರ್ಷದ ವಯೋಮಾನದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ಇದೆ. ಮಾಸಿಕ 15,196 ರೂ. ವೇತನ ನಿಗದಿ ಪಡಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 23 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ shimoga.nic.inಗೆ ಭೇಟಿ ನೀಡಬಹುದು.

ಇದನ್ನೂ ಓದಿ: ನಾಗರಿಕ ಸೇವಾ ಪರೀಕ್ಷೆಗಳಿಗೆ ಯುಪಿಎಸ್​ಸಿ ಅಧಿಸೂಚನೆ

ABOUT THE AUTHOR

...view details