ಬೆಂಗಳೂರು:ಬಾಗಲಕೋಟೆ ಜಿಲ್ಲಾ ಪಂಚಾಯತ್ನಿಂದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಭರ್ತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆಗಳ ವಿವರ: ಒಟ್ಟು ನಾಲ್ಕು ಹುದ್ದೆಗಳು ಈ ಕೆಳಗಿನ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇದೆ. ಬಾದಾಮಿಯ ಹಾಲಿಗೇರಿಯಲ್ಲಿ 1, ಬಾಗಲಕೋಟೆಯ ದೇವನಾಳ ಗ್ರಾಮ ಪಂಚಾಯತ್ನಲ್ಲಿ ಒಂದು, ಹುನಗುಂದದ ಹಾವರಗಿಯಲ್ಲಿ ಒಂದು ಹಾಗೂ ಜಮಖಂಡಿಯ ಕಂಕಣವಾಡಿ ಗ್ರಾಮ ಪಂಚಾಯತಿಯಲ್ಲಿ ಒಂದು ಹುದ್ದೆ ಇದೆ.
ವಿದ್ಯಾರ್ಹತೆ: ಪಿಯುಸಿ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವೇತನ: ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ಸರ್ಕಾರ ನಿಗದಿಸಿರುವ ಗೌರವ ಸಂಭಾವನೆ.