ಬೆಂಗಳೂರು: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಗೌರವಧನದ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: ಒಟ್ಟು 600 ಹುದ್ದೆಗಳ ಪೈಕಿ ಕರ್ನಾಟಕಕ್ಕೆ 21 ಹುದ್ದೆಗಳಿವೆ.
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 20, ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಹಿಂದುಳಿದ ವರ್ಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ಅಭ್ಯರ್ಥಿಗಳಿಗೆ ಮಾಸಿಕ 9,000 ರೂ ಗೌರವಧನ.