ಬೆಂಗಳೂರು: ಪೌರಾಡಳಿತ ನಿರ್ದೇಶನಾಯದ ವ್ಯಾಪ್ತಿಗೆ ಒಳಪಡುವ ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಲ್ಲಿ ಬಾಕಿ ಇರುವ ಸಿ ಗುಂಪಿನ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ಹುದ್ದೆ ವಿವರ:ಒಟ್ಟು ಎರಡು ಬ್ಯಾಕ್ಲಾಗ್ ಹುದ್ದೆಗಳು ಇವಾಗಿವೆ
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು (ಕಲಬುರಗಿ ಮಹಾನಗರ ಪಾಲಿಕೆ)
ದ್ವಿತೀಯ ದರ್ಜೆ ಸಹಾಯಕರು (ಬೆಳಗಾವಿ ಮಹಾನಗರಪಾಲಿಕೆ)
ವಿದ್ಯಾರ್ಹತೆ: ಪ್ರಥಮ ದರ್ಜೆ ಕಂದಾಯ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೀಮಿತಿ 18 ವರ್ಷ, ಗರಿಷ್ಠ ವಯೋಮಿತಿ 40 ವರ್ಷ ಆಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹದುದಾಗಿದೆ. ಅಧಿಕೃತ ಅಧಿಸೂಚನೆ ಜೊತೆ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಸಲ್ಲಿಕೆ ಮಾಡಬೇಕು.
ಆಯ್ಕೆ ಪ್ರಾಧಿಕಾರ ಮತ್ತು ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ ಅಂಬೇಡ್ಕರ್ ವೀದಿ, ಬೆಂಗಳೂರು- 560001
ಈ ಹುದ್ದೆಗೆ ಜೂನ್ 20 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನ ಜುಲೈ 20 ಆಗಿದೆ.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುmunicipaladmn.gov.in ಇಲ್ಲಿಗೆ ಭೇಟಿ ನೀಡಿ.
ಬಿಎಸ್ಎಫ್ ನೇಮಕಾತಿ:ಗಡಿ ಭದ್ರತಾ ಪಡೆಯಲ್ಲಿರುವ 1526 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 243 ಸಹಾಯಕ ಸಬ್ ಇನ್ಸ್ಪೆಕ್ಟರ್ (ಮಿನಿಸ್ಟ್ರಿಯಲ್) ಮತ್ತು 1283 ಹೆಡ್ ಕಾನ್ಸ್ಟೇಬಲ್ (ಕ್ಲರ್ಕ್) ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಪಿಯುಸಿ ಉತ್ತೀರ್ಣರಾಗಿದ್ದು, ಟೈಪಿಂಗ್ ಅನುಭವ ಹೊಂದಿದವರು ಅರ್ಜಿ ಹಾಕಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಜೂನ್ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 8 ಕಡೆಯ ದಿನ. ಈ ಕುರಿತು ಹೆಚ್ಚಿನ ಮಾಹಿತಿಗೆ rectt.bsf.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಟೈಪಿಸ್ಟ್ ಸೇರಿದಂತೆ 26 ಹುದ್ದೆ