ಕರ್ನಾಟಕ

karnataka

ETV Bharat / education-and-career

ಜಿಲ್ಲಾ ನ್ಯಾಯಾಲಯದಲ್ಲಿ ಟೈಪಿಸ್ಟ್​, ಜವಾನ ಹುದ್ದೆಗಳು: ಈ ಅರ್ಹತೆಗಳು ನಿಮ್ಮಲ್ಲಿದ್ದರೆ ಮತ್ತೇಕೆ ತಡ? - TYPIST AND PEON JOBS

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 58 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Typist And peon job Recruitment notification by Bangalore Rural District Court
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Dec 31, 2024, 3:29 PM IST

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ವಯೋಮಿತಿ ಸಡಿಲಿಕೆಯೊಂದಿಗೆ ಟೈಪಿಸ್ಟ್​ ಮತ್ತು ಜವಾನ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಮೂರು ವರ್ಷದ ವಯೋಮಿತಿ ಸಡಿಲಿಕೆಯೊಂದಿಗೆ ನೇಮಕಾತಿ ನಡೆಯಲಿದೆ. ಒಟ್ಟು 58 ಹುದ್ದೆಗಳಿವೆ.

ಹುದ್ದೆಗಳ ವಿವರ:ಟೈಪಿಸ್ಟ್-​​​ 30, ಜವಾನ- 30 ಹುದ್ದೆಗಳು.

ಅರ್ಹತೆ: ಟೈಪಿಸ್ಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ಪಿಯುಸಿ ಅಥವಾ ಡಿಪ್ಲೊಮಾ ಇನ್​ ಕಮರ್ಷಿಯಲ್​ ಪ್ರಾಕ್ಟಿಸ್​​ನಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಟೈಪಿಂಗ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಸಲಾಗಿದೆ.

ವೇತನ: ಜವಾನ ಹುದ್ದೆಗೆ 17,000-28,950 ರೂ., ಟೈಪಿಸ್ಟ್​​​ ಹುದ್ದೆಗೆ 21,400-42,000 ರೂ. ಮಾಸಿಕ ವೇತನ.

ಪರಿಷ್ಕೃತ ಅಧಿಸೂಚನೆ (ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಜಾಲತಾಣ)

ಅರ್ಜಿ ಸಲ್ಲಿಕೆ ಮತ್ತು ಶುಲ್ಕ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷಚೇತನ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವಿದೆ.

ಈ ಹುದ್ದೆಗೆ ಡಿಸೆಂಬರ್​ 23ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೇಯ ದಿನಾಂಕ ಜನವರಿ 6. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ bengalururural.dcourts.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ದಕ್ಷಿಣ ಮಧ್ಯ ರೈಲ್ವೆಯಲ್ಲಿ 4,232 ಹುದ್ದೆಗಳ ನೇಮಕಾತಿಗೆ ಅರ್ಜಿ; 10ನೇ ತರಗತಿ ಆದವರಿಗೆ ಅವಕಾಶ

ABOUT THE AUTHOR

...view details