ಬೆಂಗಳೂರು:ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಲಾ, ಆಫೀಸರ್ , ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿದಂತೆ ಒಟ್ಟು 143 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದ್ದು, ಹುದ್ದೆಗೆ ಅನುಸಾರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ: ಕನಿಷ್ಠ 21, ಗರಿಷ್ಠ 37 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳಿಗೆ 175 ರೂ ಮತ್ತು ಸಾಮಾನ್ಯ ಹಾಗೂ ಇತರ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 10 ಆಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bankofindia.co.in ಇಲ್ಲಿ ಭೇಟಿ ನೀಡಬಹುದಾಗಿದೆ.
ಎನ್ಸಿಬಿಯಲ್ಲಿ 31 ಹುದ್ದೆ ನೇಮಕಾತಿ:ಕೇಂದ್ರ ಗೃಹ ಸಚಿವಾಲಯದದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 31 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಕಚೇರಿ ಸೇರಿದಂತೆ ದೇಶದ ವಿವಿಧ ನಗರದ ಕಚೇರಿಗಳಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ.
ಹುದ್ದೆ ವಿವರ: ಎನ್ಸಿಬಿಯಲ್ಲಿ ಖಾಲಿ ಇರುವ ಒಟ್ಟು 31 ಸಿಬ್ಬಂದಿ ಕಾರು ಚಾಲಕರ ಹುದ್ದೆ ಭರ್ತಿ
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 56 ವರ್ಷ ಆಗಿದೆ.