ಕರ್ನಾಟಕ

karnataka

ETV Bharat / education-and-career

ಚಾಮರಾಜನಗರ: 207 ಅಂಗನಾಡಿ ಕಾರ್ಯಕರ್ತರು- ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿನ ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

chamarajanagar WCD Recruitment for Anganwadi workers
ಉದ್ಯೋಗ ಮಾಹಿತಿ (ಈಟಿವಿ ಭಾರತ್​​)

By ETV Bharat Karnataka Team

Published : Nov 4, 2024, 5:13 PM IST

ಬೆಂಗಳೂರು:ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 207 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆಗಳ ವಿವರ: ಒಟ್ಟು 207 ಹುದ್ದೆಗಳು

ಅಂಗನವಾಡಿ ಕಾರ್ಯಕರ್ತೆಯರು - 80

ಅಂಗನಾಡಿ ಸಹಾಯಕಿಯರು - 127

ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆಗಳು

ತಾಲೂಕು ಅಂ. ಕಾರ್ಯಕರ್ತೆಯರು ಅಂ. ಸಹಾಯಕಿಯರು
ಚಾಮರಾಜನಗರ 11 19
ಸಂತೇಮರಹಳ್ಳಿ 9 15
ಗುಂಡ್ಲುಪೇಟೆ 18 38
ಕೊಳ್ಳೇಗಾಲ 14 24
ಹನೂರು 24 24
ಯಳಂದೂರು 4 7

ವಿದ್ಯಾರ್ಹತೆ:ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಮುಗಿಸಿರಬೇಕು.

ವಯೋಮಿತಿ: 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್‌ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಕಡೇಯ ದಿನಾಂಕ ನ. 27 ಆಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳುhttp://karnemakaone.kar.nic.in/abcd/ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಹಾಕಿ.

ಇದನ್ನೂ ಓದಿ:ಮಂಗಳೂರು: ರಬ್ಬರ್ ಮಂಡಳಿಯಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ

ABOUT THE AUTHOR

...view details