ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 85 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳ ಕುರಿತ ವಿವರ ಇಲ್ಲಿದೆ.
ಹುದ್ದೆ ವಿವರ:
- ಸಹಾಯಕ ವ್ಯವಸ್ಥಾಪಕರು - 4
- ಪ್ರಥಮ ದರ್ಜೆ ಸಹಾಯಕರು - 18
- ಕಿರಿಯ ಸಹಾಯಕರು - 53
- ಸಹಾಯಕರು - 10
ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು ಮತ್ತು ಕಂಪ್ಯೂಟರ್ ಜ್ಞಾನ ಇರಬೇಕು.
ಪ್ರಥಮ ದರ್ಜೆ ಮತ್ತು ಕಿರಿಯ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ಪದವಿಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಕಂಪ್ಯೂಟರ್ ಜ್ಞಾನವಿರಬೇಕು.
ಸಹಾಯಕರ ಹುದ್ದೆಗಳ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.