ಬೆಂಗಳೂರು:ಎಂಜಿನಿಯರಿಂಗ್ ಕೋರ್ಸ್ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ಗೆ ನೇರ ಪ್ರವೇಶ ನೀಡಲು ನಡೆಸಿದ ಡಿಸಿಇಟಿ-24 ಪರೀಕ್ಷೆಯ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಛಾಯ್ಸ್ (Choice) ಆಯ್ಕೆ ಮಾಡಿಕೊಳ್ಳಲು ಜುಲೈ 24ರ ಬೆಳಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಮೊದಲ ಸುತ್ತಿನ ಪ್ರವೇಶ ಪ್ರಕ್ರಿಯೆ ಜುಲೈ 26ಕ್ಕೆ ಕೊನೆಯಾಗಲಿದೆ. Choice-1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಜುಲೈ 25ರ ಸಂಜೆ 4ಗಂಟೆ ಒಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೊದಲ ಸುತ್ತಿನಲ್ಲಿ ತಮಗೆ ಸಿಕ್ಕಿರುವ ಸೀಟು ಇಷ್ಟವಾದರೆ ಛಾಯ್ಸ್-1 ಅನ್ನು ಆಯ್ಕೆ ಮಾಡಿ, ಶುಲ್ಕ ಪಾವತಿಸಿ, ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದು ವೇಳೆ ಸಿಕ್ಕಿರುವ ಸೀಟು ತೃಪ್ತಿ ಇದ್ದ, ಇನ್ನೂ ಉತ್ತಮ ಸೀಟು ಬೇಕಾಗಿದೆ ಎನ್ನುವವರು ಚಾಯ್ಸ್-2 ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅವರು ಕೂಡ ಶುಲ್ಕ ಪಾವತಿಸಬೇಕು ಎಂದು ಅವರು ವಿವರಿಸಿದ್ದಾರೆ.