ಬೆಂಗಳೂರು: ವಿಶೇಷಚೇತನರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಬಿಎಂಪಿಯ 8 ವಲಯಗಳ ವಾರ್ಡ್‌ಗಳಲ್ಲಿ, ಪುರಸಭೆ ಮತ್ತು ನಗರ ಸಭೆಗಳಲ್ಲಿ ಈ ಹುದ್ದೆಗಳ ಭರ್ತಿ ಕಾರ್ಯ ನಡೆಯಲಿದೆ. ಮಾಸಿಕ ಗೌರವಧನ ಆಧಾರದಡಿ ನೇಮಕಾತಿ ಮಾಡಲಾಗುತ್ತದೆ. ಅರ್ಹ ವಿಶೇಷಚೇತನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್ಡಬ್ಲ್ಯೂ), ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿ ಬಿಬಿಎಂಪಿ ವಾರ್ಡ್‌ಗಳಲ್ಲಿ ಸ್ಥಳೀಯವಾಗಿ ವಾಸವಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಯು ಬೆಂಗಳೂರು ಗ್ರಾಮಾಂತರದಲ್ಲಿ ಸ್ಥಳೀಯವಾಗಿ ವಾಸವಿರಬೇಕು. ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು)
ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಆರೋಗ್ಯವಂತರಾಗಿರಬೇಕು.