ಬೆಂಗಳೂರು: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ)ನಲ್ಲಿ 1000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: 1000 ಎಕ್ಸಿಕ್ಯೂಟಿವ್ (ಸೇಲ್ಸ್ ಅಂಡ್ ಆಪರೇಷನ್) ಹುದ್ದೆಗಳ ಭರ್ತಿಗೆ ದೇಶದೆಲ್ಲೆಡೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ಆಗಿದ್ದು, ಗರಿಷ್ಠ ವಯೋಮಿತಿ 25 ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗೆ 250 ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 1050 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ವೇತನ:ಮಾಸಿಕ 29,000- 31,000 ರೂ ನಿಗದಿಸಲಾಗಿದೆ.
ಅಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ನವೆಂಬರ್ 11ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 16 ಆಗಿದೆ. ಈ ಹುದ್ದೆಗಳಿಗೆ ಡಿಸೆಂಬರ್ 1ರಂದು ಆನ್ಲೈನ್ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು idbibank.inಇಲ್ಲಿಗೆ ಭೇಟಿ ನೀಡಿ.