ಬೆಂಗಳೂರು: ಕರ್ನಾಟಕ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೇಡ್- 1 ಶ್ರೇಣಿಯ ಹುದ್ದೆಗಳಿಗೆ ದೇಶಾದ್ಯಂತ ನೇಮಕಾತಿ ನಡೆಸಲಾಗುತ್ತದೆ. ಒಟ್ಟು ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಿಲ್ಲ.
ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ. ಸಿಎ, ಸಿಎಸ್, ಸಿಎಂಎ, ಐಸಿಡಬ್ಲ್ಯೂಎ ಪದವೀಧರರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕವಿದೆ.