ಕರ್ನಾಟಕ

karnataka

ETV Bharat / education-and-career

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ - ಜವಾನ ಹುದ್ದೆಗೆ ಅರ್ಜಿ ಆಹ್ವಾನ

ಯಾದಗಿರಿ ಮತ್ತು ಮೈಸೂರಿನಲ್ಲಿರುವ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Group D Jobs in yadgiri and mysore
Group D Jobs in yadgiri and mysore

By ETV Bharat Karnataka Team

Published : Jan 27, 2024, 12:08 PM IST

ಬೆಂಗಳೂರು: ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು ಇವಾಗಿದ್ದು, ಒಟ್ಟು 21 ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಧಿಸೂಚನೆ

ಹುದ್ದೆ ವಿವರ: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಿಗೆ ಪತ್ರದ ಅರ್ಹತೆ ಐಚ್ಛಿಕವಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಮಾಸಿಕ 17000 - 28,950 ರೂ.ವರೆಗೆ ವೇತನ ಜೊತೆಗೆ ವಿಶೇಷ ಭತ್ಯೆಯನ್ನು ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ. ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದ್ದು, ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಜನವರಿ 16ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 15 ಕಡೆಯ ದಿನಾಂಕವಾಗಿದೆ. ಶುಲ್ಕ ಪಾವತಿಗೆ ಕಡೆಯ ದಿನಾಂಕ ಫೆಬ್ರವರಿ 16 ಆಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು yadgir.dcourts.gov.in ಗೆ ಭೇಟಿ ನೀಡಬಹುದಾಗಿದೆ.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿರುವ ಗ್ರೂಪ್​ ಡಿ ಹುದ್ದೆ:ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರ ಮತ್ತು ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಲಾ ಎರಡು ಹುದ್ದೆಗಳ ನೇಮಕಾತಿಗೆ ಆನ್​ಲೈನ್​ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು. ಅಭ್ಯರ್ಥಿ ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಬೆರಳಚ್ಚು ಪರೀಕ್ಷೆಯಲ್ಲಿ ಹಿರಿಯ ಗ್ರೇಡ್​ನೊಂದಿಗೆ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳನ್ನು ಮೆರಿಟ್​​ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ.

ಈ ಹುದ್ದೆಗೆ ಜನವರಿ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 15 ಆಗಿದೆ. ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆatimysore.karnataka.gov.in ಇಲ್ಲಿಗೆ ಭೇಟಿ ನೀಡಬೇಕಿದೆ.

ಇದನ್ನೂ ಓದಿ: ಹಾವೇರಿ: 152 ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ

ABOUT THE AUTHOR

...view details