ಬೆಂಗಳೂರು:ಪ್ರಸ್ತಕ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಂಗಳೂರು ವಿವಿ ಹಾಗು ಅದರ ವ್ಯಾಪ್ತಿಯ ಕಾಲೇಜುಗಳಲ್ಲಿರುವ ಪೂರ್ಣಕಾಲಿಕ ಮತ್ತು ಅರೆಕಾಲಿಕ ಹುದ್ದೆಗಳು ಇವಾಗಿವೆ.
ಹುದ್ದೆಗಳ ವಿವರ: ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ಯ, ಸಮಾಜಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಭೂಗೋಳಶಾಸ್ತ್ರ, ದೈಹಿಕ ಶಿಕ್ಷಣ, ರಸಯನಶಾಸ್ತ್ರ, ಭೌತಿಕ ಶಾಸ್ತ್ರ, ಮೈಕ್ರೋಬಯಾಲಜಿ, ಮಥಮೆಟಿಕ್ಸ್, ಕಂಪ್ಯೂಟರ್ ಸೈನ್ಸ್/ಬಿಸಿಎ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಕಾಮರ್ಸ್, ಬಿಬಿಎ ಕೋರ್ಸ್ಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಆಯ್ಕೆ:ಯುಜಿಸಿ ನಿಗದಿತ ಮಾನದಂಡ ಮತ್ತು ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದ ಅನುಸಾರ ಆಯ್ಕೆ ಪ್ರಕ್ರಿಯೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಎಸ್ಎಸ್ಎಲ್ಸಿ ಅಂಕಪಟ್ಟಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಯುಜಿಸಿ, ಎನ್ಇಟಿ, ಎಸ್ಎಲ್ಇಟಿ ಉತ್ತೀರ್ಣತೆ ಅಥವಾ ಪಿಎಚ್ಡಿ ಅಥವಾ ಎಂಫಿಲ್ ಪದವಿ ಪ್ರಮಾಣ ಪತ್ರ, ಸಂಶೋಧನಾ ಪತ್ರಿಕೆಗಳನ್ನು ಲಗತ್ತಿಸುವುದು ಕಡ್ಡಾಯ.
ಈ ಹುದ್ದೆಗೆ 200 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಭರಿಸಬೇಕು.