ಬೆಂಗಳೂರು:ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಪೂರ್ಣಕಾಲಿಕ ಮತ್ತು ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿ.ವಿ.ಯ ನಂದಿಹಳ್ಳಿ ಮತ್ತು ಯಲಬುರ್ಗಾದಲ್ಲಿವ ವಿವಿಧ ಸ್ನಾತಕೋತ್ತರ ವಿಭಾಗದಲ್ಲಿ ಅಭ್ಯರ್ಥಿಗಳು ಕಾರ್ಯನಿರ್ವಹಿಸಬೇಕಿದೆ.
ಹುದ್ದೆಗಳ ವಿವರ: ಒಟ್ಟು 84 ಹುದ್ದೆಗಳು.
ಇಂಗ್ಲಿಷ್, ಕನ್ನಡ, ನಾಟಕ, ವಾಣಿಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಕಾರ್ಯ, ಸಮೂಹ ಮಾಧ್ಯಮ ಮತ್ತು ಪತ್ರಿಕೋದ್ಯಮ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಮಹಿಳಾ ಅಧ್ಯಯನ, ರಸಾಯನಶಾಸ್ತ್ರ, ಭೌತಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ಅಧ್ಯಯನ ವಿಭಾಗ ಸೇರಿದಂತೆ ಹಲವು ವಿಭಾಗದಲ್ಲಿ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ:ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಯುಜಿಸಿ ಮತ್ತು ಸರ್ಕಾರಿ ನಿಯಮಗಳ ಅನುಸಾರ ನೇಮಕಾತಿ ನಡೆಯುತ್ತದೆ.