ಬೆಂಗಳೂರು: ಕೇಂದ್ರ ಮೀಸಲು ಪೊಲೀಸ್ ಪಡೆಯಿಂದ 169 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗ್ರೂಪ್ ಸಿ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುವುದು. ಈ ಹುದ್ದೆಗಳಿಗೆ ಕೇವಲ ಕ್ರೀಡಾ ಕೋಟಾ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ:ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನಿಂದ 169 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು. ವಿವಿಧ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು 8 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 10 ವರ್ಷ ಮೀರಿರಬಾರದು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂ.ವರೆಗೆ ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಪಡೆಯಲಾಗಿದೆ. ಒಬಿಸಿ ಮತ್ತು ಇತರೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಜನವರಿ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 15 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rect.crpf.gov.in ಅಥವಾ recruitment.crpf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ರೈಲ್ವೆ ಭದ್ರತಾ ಪಡೆಯಲ್ಲಿ ನೇಮಕಾತಿ:ರೈಲ್ವೆ ಭದ್ರತಾ ಪಡೆಯಿಂದ 2,250 ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕಾನ್ಸ್ಟೇಬಲ್ ಹುದ್ದೆಗೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕಾನ್ಸ್ಟೇಬಲ್ ಹುದ್ದೆಗೆ ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ. ಸಬ್ ಇನ್ಸ್ಪೆಕ್ಟರ್ ಕನಿಷ್ಠ 20 ರಿಂದ ಗರಿಷ್ಠ 25 ವರ್ಷ ಪೂರ್ಣಗೊಂಡಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಕ್ಷಮತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ. ಜನವರಿ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31 ಕಡೇಯ ದಿನಾಂಕ. ಈ ಕುರಿತು ಸಂಪೂರ್ಣ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಇನ್ನಿತರ ಮಾಹಿತಿಗೆ indianrailways.gov.in ಇಲ್ಲಿಗೆ ಭೇಟಿ ನೀಡಿ.