ಕರ್ನಾಟಕ

karnataka

ETV Bharat / education-and-career

ವಾಯುಸೇನೆಯಲ್ಲಿ ಅಗ್ನಿವೀರ್​ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಎರಡೇ ದಿನ ಬಾಕಿ

ವಾಯುಸೇನೆಯಲ್ಲಿ ಅಗ್ನಿವೀರ್​ ಹುದ್ದೆಗಳ ಭರ್ತಿಗೆ ಈ ಹಿಂದೆ ನಿಗದಿಪಡಿಸಿದ್ದ ದಿನಾಂಕವನ್ನು ವಿಸ್ತರಿಸಲಾಗಿದೆ.

IAF Agniveer recruitment date expanded
IAF Agniveer recruitment date expanded

By ETV Bharat Karnataka Team

Published : Feb 9, 2024, 4:09 PM IST

ಬೆಂಗಳೂರು: ಯುವ ಜನತೆಗೆ ದೇಶ ಸೇವೆ ಮಾಡುವ ಅವಕಾಶ ಕಲ್ಪಿಸುವ ಉದ್ದೇಶದಿಂದ ರಕ್ಷಣಾ ಇಲಾಖೆ 'ಅಗ್ನಿಪಥ್'​ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದೆ. ಇದರ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಪಥ್​ ಮೂಲಕ ಈಗಾಗಲೇ ಸಾವಿರಾರು ಯುವಜನತೆ ರಾಷ್ಟ್ರ ರಕ್ಷಣೆಗಾಗಿ ನಾಲ್ಕು ವರ್ಷ ಸೇವೆ ಸಲ್ಲಿಸುತ್ತಿದ್ದಾರೆ.

ಹುದ್ದೆಗಳ ವಿವರ: ಅವಿವಾಹಿತ ಯುವಕ/ಯುವತಿಯರು ಅಗ್ನಿವೀರ್​​ ಹುದ್ದೆಯ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ.

ವಿದ್ಯಾರ್ಹತೆ: ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್​​)/ ಮೂರು ವರ್ಷಗಳ ಡಿಪ್ಲೊಮಾ ಪದವಿ ಪಡೆದಿರಬೇಕು.

ವಯೋಮಿತಿ: ಜನವರಿ 2, 2004ರಿಂದ ಜುಲೈ 2, 2007ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅಧಿಸೂಚನೆ

ವೇತನ: ಈ ಹುದ್ದೆಗಳಿಗೆ ಮೊದಲ ವರ್ಷ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನವಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಎಲ್ಲಾ ವರ್ಗದ ಅಭ್ಯರ್ಥಿಗಳು 550 ರೂ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ, ದೈಹಿಕ ಸಾಮರ್ಥ್ಯ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.

ಜನವರಿ 17ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 6 ಅಂತಿಮ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ದಿನವನ್ನು ಫೆ.11ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆindianairforce.nic.in ಅಥವಾ agnipathvayu.cdac.in/AV/ ಈ ಜಾಲತಾಣಕ್ಕೆ ಭೇಟಿ ನೀಡಿ.

ಇದನ್ನೂ ಓದಿ: ರಕ್ಷಣಾ ಇಲಾಖೆಯಲ್ಲಿ ನೇಮಕಾತಿ; ಎಸ್​ಎಸ್​ಎಲ್​ಸಿ ಪಾಸಾದವರಿಗೆ ಅವಕಾಶ

ABOUT THE AUTHOR

...view details