ಕರ್ನಾಟಕ

karnataka

ETV Bharat / education-and-career

ಇಂಡಿಯನ್​ ಬ್ಯಾಂಕ್​: 1,500 ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ - Indian Bank Jobs - INDIAN BANK JOBS

ಇಂಡಿಯನ್​ ಬ್ಯಾಂಕ್​ ಹಾಗೂ ಭಾರತ್​ ಎಲೆಕ್ಟ್ರಾನಿಕ್ಸ್​​ ಲಿಮಿಟೆಡ್​ನಲ್ಲಿರುವ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

Indian Bank and BEL Apprentice post Recrutiment
ಇಂಡಿಯನ್​ ಬ್ಯಾಂಕ್​ (ETV Bharat)

By ETV Bharat Karnataka Team

Published : Jul 11, 2024, 12:35 PM IST

ಬೆಂಗಳೂರು: ಇಂಡಿಯನ್​ ಬ್ಯಾಂಕ್​ನಲ್ಲಿ ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ದೇಶಾದ್ಯಂತ 1,500 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಕರ್ನಾಟಕಕ್ಕೆ 47 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ವೇತನ: ಮೆಟ್ರೊ/ನಗರ ಬ್ರ್ಯಾಂಚ್​ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15 ಸಾವಿರ ರೂ ಹಾಗು ಗ್ರಾಮೀಣ ಮತ್ತು ಅರೆ ಗ್ರಾಮೀಣ ಬ್ರ್ಯಾಂಚ್‌​ಗೆ ಆಯ್ಕೆಯಾದವರಿಗೆ 12 ಸಾವಿರ ರೂ ವೇತನ.

ವಯೋಮಿತಿ: ಕನಿಷ್ಠ ವಯೋಮಿತಿ 20 ವರ್ಷ ಮತ್ತು ಗರಿಷ್ಠ ವಯೋಮಿತಿ 28 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಸಿ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕ ಪಾವತಿಸಬೇಕು.

ಅಭ್ಯರ್ಥಿಗಳನ್ನು ಆನ್​ಲೈನ್​ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಜುಲೈ 10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕಡೇಯ ದಿನ. ಈ ಕುರಿತ ಹೆಚ್ಚಿನ ಮಾಹಿತಿಗೆ indianbank.inಭೇಟಿ ನೀಡಿ.

ಅಧಿಸೂಚನೆ (ಇಂಡಿಯನ್​ ಬ್ಯಾಂಕ್​)

ಬೆಂಗಳೂರು ಬಿಇಎಲ್​ನಲ್ಲಿ ಅಪ್ರೆಂಟಿಸ್​ ಹುದ್ದೆ:ಭಾರತ್​ ಎಲೆಕ್ಟ್ರಾನಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪದವೀಧರ ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಬಿಕಾಂ ಮತ್ತು ಬಿಬಿಎ ಪದವೀಧರರು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.

ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12,500 ರೂ ವೇತನವಿದೆ.

ಈ ಹುದ್ದೆಗೆ ಜುಲೈ 16ರಂದು ನೇರ ಸಂದರ್ಶನ ನಡೆಯಲಿದೆ. ಸೆಂಟರ್​ ಫಾರ್​ ಲರ್ನಿಂಗ್​ ಆ್ಯಂಡ್​ ಡೆವಲಪ್​ಮೆಂಟ್​ (ಸಿಎಲ್​ಡಿ), ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​, ಜಾಲಹಳ್ಳಿ ಪೋಸ್ಟ್​, ಬೆಂಗಳೂರು -560013 ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ bel-india.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ:8,326 ಪೋಸ್ಟ್‌ಗಳ ಭರ್ತಿಗೆ ಎಸ್‌ಎಸ್‌ಸಿ ಬೃಹತ್ ಅಧಿಸೂಚನೆ; ಜಸ್ಟ್​ SSLC​​ ಪಾಸ್ ಮಾಡಿ - ಅರ್ಜಿ ಸಲ್ಲಿಸಿ

ABOUT THE AUTHOR

...view details