ಬೆಂಗಳೂರು: ಇನ್ಸುಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)ನಿಂದ 6128 ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಯುಕೋ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಿಎನ್ಬಿ, ಯುಬಿಐ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ಗಳಲ್ಲಿ ಈ ನೇಮಕಾತಿ ನಡೆಯಲಿದೆ.
ದೇಶದ ವಿವಿಧ ರಾಜ್ಯಗಳ ಖಾಲಿ ಇರುವ ಸ್ಥಾನಗಳಿಗೆ ಅನುಸಾರವಾಗಿ ಈ ಹುದ್ದೆ ಭರ್ತಿ ನಡೆಯಲಿದ್ದು, ಕರ್ನಾಟಕದಲ್ಲಿ 457 ಪೋಸ್ಟ್ ಅನ್ನು ನಿಗದಿಸಲಾಗಿದೆ.
ವಿದ್ಯಾರ್ಹತೆ:ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ ಪೂರ್ಣಗೊಳಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಕಲಚೇತನ, ಇಎಸ್ಎಂ ಅಭ್ಯರ್ಥಿಗಳಿಗೆ 175 ರೂ, ಇತರೆ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಪ್ರೀಲಿಮ್ಸ್ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಬಳಿಕ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಇರಲಿದೆ.