ಬೆಂಗಳೂರು: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಿಂದ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗ್ರೇಡ್ 1 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇದೆ.
ಹುದ್ದೆ ವಿವರ: ಮಂಡ್ಯ ಡಿಸಿಸಿ ಬ್ಯಾಂಕ್ನಲ್ಲಿನ ಮಧ್ಯಮ ಆಡಳಿತ ವೃಂದದಲ್ಲಿನ ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರ ಒಂದು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ನಲ್ಲಿ ಎಂಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಕನ್ನಡ ಓದುವ, ಬರೆಯುವ ಮತ್ತು ಸ್ಪಷ್ಟವಾಗಿ ಮಾತನಾಡುವ ಸಾಮರ್ಥ್ಯವನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಪ್ರವರ್ಗ 2ಎ, 2ಬಿ, 3 ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.