ಕರ್ನಾಟಕ

karnataka

ETV Bharat / education-and-career

ಯುಎಇನಲ್ಲಿ ಪುರುಷ ನರ್ಸ್​ಗಳಿಗೆ ಉದ್ಯೋಗಾವಕಾಶ - UAE Job Opportunities - UAE JOB OPPORTUNITIES

ನೀವು ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಮುಗಿಸಿದ್ದೀರಾ? ಹೌದು ಎಂದಾದರೆ, ನಿಮಗೆ ಯುಎಇನಲ್ಲಿ ಕೆಲಸ ಮಾಡುವ ಅವಕಾಶವಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Aug 2, 2024, 6:57 PM IST

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಪುರುಷ ನರ್ಸ್​ಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಉದ್ಯೋಗ ಒದಗಿಸುತ್ತಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ಯುಎಇನಲ್ಲಿ ಪುರುಷ ನರ್ಸ್​ಗಳಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಈ ಯೋಜನೆ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.

ಯುಎಇನಲ್ಲಿ ಪುರುಷ ನರ್ಸಿಂಗ್ ಹುದ್ದೆ ಬಯಸುವವರು 40 ವರ್ಷದ ಒಳಗಿನವರಾಗಿರಬೇಕು. 2 ವರ್ಷ ಅನುಭವ ಹೊಂದಿರಲೇಬೇಕು. ಆಯ್ಕೆಯಾಗುವವರಿಗೆ 5 ಸಾವಿರ ಎಇಡಿ (ಮಾಸಿಕ 1,11,000 ರೂ. ವೇತನ), 30 ದಿನ ವೇತನ ಸಹಿತ ರಜೆ, ಕಂಪನಿ ವತಿಯಿಂದಲೇ ವೈದ್ಯಕೀಯ ವಿಮೆ, ಸಾರಿಗೆ ಮತ್ತು ವಿಮಾನಯಾನ ಟಿಕೆಟ್, ಆಹಾರ ಸೌಲಭ್ಯ ಹಾಗು ವೀಸಾ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತದೆ.

ಜಾಬ್ ಪೋಸ್ಟರ್​ (ETV Bharat)

ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಉಚಿತ. ಆಗಸ್ಟ್ ತಿಂಗಳಿನಲ್ಲಿ ಆನ್‌ಲೈನ್ ಮೂಲಕ ಸಂದರ್ಶನ ನಡೆಯಲಿದೆ. ಸಂದರ್ಶನದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಕೌಶಲ್ಯಾಭಿವೃದ್ಧಿ ನಿಗಮ ತಿಳಿಸಿದೆ.

ಕೆಎಸ್‌ಡಿಸಿ ಈ ಹಿಂದೆ ಸ್ಲೋವಾಕಿಯಾದಲ್ಲಿ ಐಟಿ, ಡಿಪ್ಲೊಮಾ, ಐಟಿಐ ಮತ್ತು ಇತರ ಉದ್ಯೋಗ-ಆಧಾರಿತ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಲವಾರು ಯುವಕರಿಗೆ ಉದ್ಯೋಗಗಳನ್ನು ಒದಗಿಸಿದೆ. ಹಂಗೇರಿಯಲ್ಲೂ 37 ಡ್ರೈವರ್​ಗಳಿಗೆ ಉದ್ಯೋಗ ಒದಗಿಸಿತ್ತು. ವೆಲ್ಡರ್‌ಗಳಿಗೆ ಮಾರಿಷಸ್‌ನಲ್ಲಿ ಉದ್ಯೋಗ ಪಡೆಯಲು ಸಹಾಯ ಮಾಡಿದೆ.

ಹೆಚ್ಚಿನ ವಿವರಗಳಿಗೆ ಕೆಎಸ್‌ಡಿಸಿ ವೆಬ್​ಸೈಟ್ http://imck.kaushalkar.com ಭೇಟಿ ನೀಡಬಹುದು. hr.imck@gmail.com ಮೇಲ್​ ಐಡಿ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು 9606492213/ 9606492214 ವಾಟ್ಸ್‌ಆ್ಯಪ್ ನಂಬರ್​ಗಳ ಮೂಲಕ ವಿವರ ಪಡೆಯಬಹುದು. ಇಂಟರ್ನ್ಯಾಷನಲ್ ಮೈಗ್ರೇಶನ್ ಸೆಂಟರ್– ಕರ್ನಾಟಕ (IMC-K), ನಾಲ್ಕನೇ ಮಹಡಿ, ಕಲ್ಯಾಣ ಸುರಕ್ಷಾ ಭವನ, ಐಟಿಐ ಕಾಲೇಜು ಕ್ಯಾಂಪಸ್, ಡೇರಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ಬೆಂಗಳೂರು–560029 ಈ ವಿಳಾಸಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ:ಕೇಂದ್ರದ ಎನ್​ಸಿಎಸ್​ ಪೋರ್ಟಲ್​ನಲ್ಲಿ 20ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ! - National Career Service portal

ABOUT THE AUTHOR

...view details