ಕರ್ನಾಟಕ

karnataka

ETV Bharat / education-and-career

ಐಐಎಂಬಿ ಮತ್ತು ಐಐಎಸ್ಸಿಯಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಹುದ್ದೆಗಳ ಮಾಹಿತಿ - ಐಐಎಂಬಿ ನೇಮಕಾತಿ

ಬೆಂಗಳೂರಿನ ಐಐಎಂ ಮತ್ತು ಐಐಎಸ್ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

job opportunity in IIMB and IISC
job opportunity in IIMB and IISC

By ETV Bharat Karnataka Team

Published : Jan 31, 2024, 1:37 PM IST

ಹೈದರಾಬಾದ್​: ಬೆಂಗಳೂರಿನ ಇಂಡಿಯನ್​ ಇನ್ಸುಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​​ (ಐಐಎಂಬಿ)ಯಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕೇತರ ಹುದ್ದೆಗಳು ಇವಾಗಿದ್ದು, ಒಂದು ವರ್ಷದ ಅವಧಿಗೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು.

ಐಐಎಂಬಿ ಅಧಿಸೂಚನೆ

ಹುದ್ದೆ ವಿವರ: ಐಐಎಂಬಿಯಲ್ಲಿರುವ ಅಕಾಡೆಮಿಕ್​ ಅಸೋಸಿಯೇಟ್​​- ಪಬ್ಲಿಕ್​ ಪಾಲಿಸಿ ಏರಿಯಾ ಹುದ್ದೆ ಭರ್ತಿಗೆ ಕ್ರಮ

ವಿದ್ಯಾರ್ಹತೆ: ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವೇತನ: ಮಾಸಿಕ 38,000 - 44,000 ರೂ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಫೆಬ್ರವರಿ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು iimb.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಐಐಎಸ್ಸಿಯಲ್ಲಿದೆ ಹಣಕಾಸು ನಿಯಂತ್ರಣಾಧಿಕಾರಿ ಹುದ್ದೆ

ಬೆಂಗಳೂರಿಯ ಇಂಡಿಯನ್​ ಇನ್ಸುಟಿಟ್ಯೂಟ್​ ಆಫ್​ ಸೈನ್ಸ್​​ನಲ್ಲಿ (ಐಐಎಸ್ಸಿ) ಹಣಕಾಸು ನಿಯಂತ್ರಣಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಅವಧಿಗೆ ಈ ಹುದ್ದೆ ನೇಮಕಾತಿ ನಡೆಸಲಾಗುವುದು.

ಹುದ್ದೆ ವಿವರ: ಐಐಎಸ್ಸಿಯಲ್ಲಿ ಹಣಕಾಸು ನಿಯಂತ್ರಣಾಧಿಕಾರಿ ಹುದ್ದೆಗೆ ನೇರ ನೇಮಕಾತಿ, ನಿಯೋಜನೆ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.

ವಿದ್ಯಾರ್ಹತೆ: ಅಭ್ಯರ್ಥಿಯು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಅನುಭವ: ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಅಥವಾ ವಿಶ್ವವಿದ್ಯಾಲಯ ಅಥವಾ ಪಿಎಸ್​ಯುನಲ್ಲಿ ಅಕೌಂಟ್ಸ್​​, ಆಡಿಟ್, ಹಣಕಾಸು ನಿರ್ವಹಣೆ ವಿಷಯದಲ್ಲಿ ಕಾರ್ಯ ನಿರ್ವಹಿಸಿದ ಅನುವ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಾನ 55 ವರ್ಷ ಆಗಿದೆ.

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 8 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು iisc.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನ

ABOUT THE AUTHOR

...view details