ಕರ್ನಾಟಕ

karnataka

ETV Bharat / education-and-career

ಐಐಎಸ್ಸಿಯಲ್ಲಿ ಸಹಾಯಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ - ಐಐಎಸ್ಸಿಯಲ್ಲಿ ಶಿಕ್ಷಕರ ಹುದ್ದೆ

ಐಐಎಸ್ಸಿಯಲ್ಲಿ ಕರೆಯಲಾಗಿರುವ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

jobs in IISC Bangalore
jobs in IISC Bangalore

By ETV Bharat Karnataka Team

Published : Feb 10, 2024, 5:57 PM IST

ಬೆಂಗಳೂರು: ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ)ಯಲ್ಲಿ ಪದವಿ ಕಾಲೇಜುಗಳಿಗೆ ಸಹಾಯಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆ ಕುರಿತ ಮಾಹಿತಿ ಈ ಕೆಳಗಿನಂತಿದೆ.

ಅಧಿಸೂಚನೆ

ಹುದ್ದೆ ವಿವರ: ಐಐಎಸ್ಸಿಯಲ್ಲಿ 8 ಹುದ್ದೆಗಳು ಇವೆ.

  • ಬಯೋಲಾಜಿ - 2
  • ಕೆಮಿಸ್ಟ್ರಿ - 1
  • ಅರ್ಥ್​​​ ಮತ್ತು ಎನ್ವರಮೆಂಟಲ್​ ಸೈನ್ಸ್ - 2
  • ಇಂಜಿನಿಯರಿಂಗ್​​ - 1
  • ಮೆಟಿರಿಯಲ್ಸ್​ - 1
  • ಪಿಸಿಕ್ಸ್​ - 1

ವಿದ್ಯಾರ್ಹತೆ: ಕೆಮಿಸ್ಟ್ರಿ, ಬಯೋಲಾಜಿ, ಫಿಸಿಕ್ಸ್​ನಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಉಳಿದ ಹುದ್ದೆಗಳಿಗೆ ಬಿಟೆಕ್​, ಎಂಟೆಕ್​, ಎಂಎಸ್ಸಿ ಪದವಿ ಹೊಂದಿರಬೇಕು.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಐದು ವರ್ಷದ ಅವಧಿಗೆ ಹುದ್ದೆ ವಿಸ್ತರಣೆ ಮಾಡಲಾಗುವುದು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 19 ಆಗಿದೆ.

ಈ ಹುದ್ದೆಗಳ ಕುರಿತು ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿ iisc.ac.in ಇಲ್ಲಿಗೆ ಭೇಟಿ ನೀಡಬಹುದು.

ಶಿವಮೊಗ್ಗದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ:

ಶಿವಮೊಗ್ಗ ಜಿಲ್ಲಾ ಪಂಜಾಯತ್​​ ವತಿಯಿಂದ 14 ಗ್ರಂಥಾಲಯ ಮತ್ತು ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಶಿಕಾರಿಪುರ, ಸೊರಬ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿವಮೊಗ್ಗ ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ. ಪಿಯುಸಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 35 ವರ್ಷದ ವಯೋಮಾನದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ಇದೆ. ಮಾಸಿಕ 15,196 ರೂ. ವೇತನ ನಿಗದಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 23 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆshimoga.nic.inಗೆ ಭೇಟಿ ನೀಡಬಹುದು.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details