ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ (ಎಎಐ) 490 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿವಿಧ ವಿಭಾಗದಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ (ಕಿರಿಯ ಕಾರ್ಯನಿರ್ವಾಹಕ ಅಧಿಕಾರಿ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಈ ಹುದ್ದೆ ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆ ಮತ್ತು ವಿದ್ಯಾರ್ಹತೆ ಮಾಹಿತಿ ಇಂತಿದೆ
ಹುದ್ದೆ | ಹುದ್ದೆ ಸಂಖ್ಯೆ | ವಿದ್ಯಾರ್ಹತೆ |
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) | 3 | ಆರ್ಕಿಟೆಕ್ಚರ್ನಲ್ಲಿ ಪದವಿ |
ಜೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್- ಸಿವಿಲ್) | 90 | ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ |
ಜೂನಿಯರ್ ಎಕ್ಸಿಕ್ಯೂಟಿವ್ (ಇಂಜಿನಿಯರಿಂಗ್- ಎಲೆಕ್ಟ್ರಾನಿಕಲ್ ) | 106 | ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ |
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) | 278 | ಎಲೆಕ್ಟ್ರಾನಿಕ್ಸ್. ಟೆಲಿ ಕಮ್ಯೂನಿಕೇಷನ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ |
ಜೂನಿಯರ್ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ) | 13 | ಕಂಪ್ಯೂಟರ್ಸೈನ್ಸ್, ಎಂಸಿಎ ಪದವಿ |
ವಯೋಮಿತಿ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ, ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ಇರಲಿದೆ.
ವೇತನ: 40,000 -140000 ರೂ. ಮಾಸಿಕ ವೇತನ.