ಬೆಂಗಳೂರು:ಕರ್ನಾಟಕ ಹೈ ಕೋರ್ಟ್ನಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ನಡೆಸಲಾಗುವುದು.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದೊಂದಿಗೆ ಕಾನೂನು ಪದವಿಯನ್ನು ಶೇ 50ರಷ್ಟು ಅಂಕದೊಂದಿಗೆ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನಲ್ಲಿ ನೋಂದಣಿಯನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯ ಸಂಬಂಧಿತ ಕೌಶಲ್ಯವನ್ನು ಹೊಂದಿರಬೇಕು. ಇವರು ನ್ಯಾಯಾಂಗದ ಕೆಲಸದ ಜೊತೆಗೆ ಆಡಳಿತಾತ್ಮಕದ ಕೆಲಸದಲ್ಲೂ ಸಹಾಯ ಮಾಡಬೇಕಿರುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 25 ಸಾವಿರ ರೂ. ಗೌರವಧನವನ್ನು ನೀಡಲಾಗುತ್ತದೆ.
ಆಯ್ಕೆ: ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 17.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು karnatakajudiciary.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ 41 ಹುದ್ದೆ:ಬೆಳಗಾವಿ ಜಿಲ್ಲಾ ನ್ಯಾಯ ಘಟಕದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್ -5, ಟೈಪಿಸ್ಟ್- 1, ಪ್ರೊಸೆಸ್ ಸರ್ವರ್- 2, ಜವಾನ-33 ಹುದ್ದೆ ಸೇರಿದಂತೆ 41 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು. ಜವಾನ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಗರಿಷ್ಠ ವಯೋಮಿತಿ 35 ವರ್ಷ ಆಗಿದ್ದು, ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಏಪ್ರಿಲ್ 14.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ belagavi.dcourts.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಕಷ್ಟಗಳು ಜೊತೆಯಾದವು, ಕನಸುಗಳು ಮುನ್ನಡೆಸಿದವು: ಯುವಕರಿಬ್ಬರ ಬಾಳಲ್ಲಿ ಉದ್ಯೋಗಗಳ ಸುರಿಮಳೆಯೇ ಆದವು