ಕರ್ನಾಟಕ

karnataka

ETV Bharat / education-and-career

ಕರ್ನಾಟಕ ಲೋಕಾಯುಕ್ತದಲ್ಲಿದೆ ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆ; ಪಿಯುಸಿ ಆದವರಿಗೆ ಅವಕಾಶ

ಒಟ್ಟು 30 ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆ. ಇದರಲ್ಲಿ ಕಲ್ಯಾಣಕ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

Karnataka Lokayukta Recruitment for 30 clerk  post
ಲೋಕಾಯುಕ್ತ ಕಚೇರಿ (ಈಟಿವಿ ಭಾರತ್​​)

By ETV Bharat Karnataka Team

Published : 4 hours ago

ಬೆಂಗಳೂರು:ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್​ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆ ಕುರಿತ ಮಾಹಿತಿ ಇಲ್ಲಿದೆ.

ಹುದ್ದೆ ವಿವರ:ಒಟ್ಟು 30 ಟೈಪಿಸ್ಟ್​​ ಕಂ ಕ್ಲರ್ಕ್​ ಹುದ್ದೆ. ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಅಧಿಸೂಚನೆ (ಕರ್ನಾಟಕ ಲೋಕಯುಕ್ತ)

ವಿದ್ಯಾರ್ಹತೆ: ಅಭ್ಯರ್ಥಿಯು ಪಿಯುಸಿ ಉತ್ತೀರ್ಣಗೊಂಡು, ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣಗೊಂಡಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ, ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಕ್ಟೋಬರ್​ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ನವೆಂಬರ್​ 29 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ lokayukta.karnataka.gov.in ಭೇಟಿ ನೀಡಿ.

ಇದನ್ನೂ ಓದಿ: ಕೆಪಿಎಸ್​ಸಿ ನೇಮಕಾತಿ; ಅರ್ಜಿ ಸಲ್ಲಿಕೆಗೆ ನವೆಂಬರ್​ 4 ಕಡೆಯ ದಿನ

ABOUT THE AUTHOR

...view details