ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ (ಗ್ರಾಮ ಲೆಕ್ಕಾಧಿಕಾರಿ) ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮೇ 4 ಕಡೇಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಮೇ 7 ಅಂತಿಮ ದಿನವಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಇನ್ನೊಂದೇ ದಿನ ಬಾಕಿ ಉಳಿದಿದ್ದು, ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ:ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ, ಡಿಪ್ಲೋಮಾ ಅಥವಾ ಎರಡು ವರ್ಷದ ಐಟಿಐ ಅಥವಾ ಎರಡು ವರ್ಷದ ಜೆಒಸಿ, ಜೆಒಡಿಸಿ, ಜೆಎಲ್ಡಿಸಿ ವಿದ್ಯಾಭ್ಯಾಸವನ್ನು ಹೊಂದಿರಬೇಕು.
ವೇತನ: 21,400 - 42,000 ರೂ. ಮಾಸಿಕ
ವಯೋಮಿತಿ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.