ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ 2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನಿಸಿದೆ. ಶಿಕ್ಷಣ ಇಲಾಖೆ ನಡೆಸುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 5 ಕಡೇಯ ದಿನ.
ವಿದ್ಯಾರ್ಹತೆ: ಪತ್ರಿಕೆ 1 (1ರಿಂದ 5ನೇ ತರಗತಿ). ಪಿಯುಸಿ ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕ ಗಳಿಸಿರಬೇಕು. ಎರಡು ವರ್ಷದ ಡಿ.ಎಡ್ ಕೋರ್ಸ್‌ನಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ನಾಲ್ಕು ವರ್ಷದ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ ಅಥವಾ ಎರಡು ವರ್ಷದ ಡಿಪ್ಲೊಮೊ ಇನ್ ಎಜುಕೇಶನ್ ಅಥವಾ ಬಿ.ಎಡ್ ಪದವಿ ಪೂರ್ಣಗೊಳಿಸರಬೇಕು. ಈ ಕೋರ್ಸ್ಗಳ ಪ್ರವೇಶಕ್ಕೆ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು.
ಪತ್ರಿಕೆ 2: ಪದವಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕ ಗಳಿಸಿರಬೇಕು. ಎರಡು ವರ್ಷದ ಡಿಎಲ್.ಎಡ್ ಅಥವಾ ಬಿ.ಇಡಿ ಪದವಿ ಅಥವಾ ನಾಲ್ಕು ವರ್ಷದ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ ಅಥವಾ ಎರಡು ವರ್ಷದ ಬಿ.ಇಡಿ (ವಿಶೇಷ ಶಿಕ್ಷಣ) ತೇರ್ಗಡೆ ಹೊಂದಿದ ಹಾಗೂ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.
ಪತ್ರಿಕೆ-1: ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು- 700 ರೂ ಹಾಗು ಪ.ಜಾ, ಪ. ವರ್ಗ, ಪ್ರವರ್ಗ-1 - 350 ರೂ