ಕರ್ನಾಟಕ

karnataka

ETV Bharat / education-and-career

ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ - VILLAGE ACCOUNTANT OFFICER RESULT

1,000 ಗ್ರಾಮಾಡಳಿತ ಹುದ್ದೆಗಳಿಗೆ ಅಕ್ಟೋಬರ್​ 27ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ರಾಜ್ಯಾದ್ಯಾಂತ ಪರೀಕ್ಷೆ ನಡೆಸಿತ್ತು.

kea-announced-the-village-accountant-officer-final-result
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)

By ETV Bharat Karnataka Team

Published : Dec 12, 2024, 5:49 PM IST

Updated : Dec 13, 2024, 12:39 PM IST

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಸಲಾದ ಲಿಖಿತ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ ಪ್ರಕಟಿಸಿದೆ.

ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಕನಿಷ್ಠ ಶೇ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಅಂಕಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು. ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ cetonline.karnataka.gov.in/kea/vacrec24ಫಲಿತಾಂಶ ವೀಕ್ಷಿಸಬಹುದು.

ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ - VILLAGE ACCOUNTANT OFFICER RESULT

ಪರೀಕ್ಷೆ ನಡೆದಿದ್ದು ಹೇಗೆ?:29-09-2024 ಮತ್ತು 26-10-2024 ರಂದು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಆ ಬಳಿಕ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಕೂಡಾ ಪ್ರಕಟಿಸಲಾಗಿತ್ತು. ಅಕ್ಟೋಬರ್ 27​ 2024 ರಂದು ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಇದಾದ ಬಳಿಕ ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ನವೆಂಬರ್ 27 2024 ರಂದು ಪ್ರಕಟಿಸಲಾಗಿತ್ತು. ಮರು ದಿನ ಅಂದರೆ 28ನೇ ನವೆಂಬರ್​ -2024 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಆಹ್ವಾನಿಸಲಾಗಿತ್ತು.

ಎಲ್ಲ ಪರಿಶೀಲನೆಗಳ ಬಳಿಕ ಅಂತಿಮ ಪಟ್ಟಿ ಬಿಡುಗಡೆ:ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 2021 (ತಿದ್ದುಪಡಿ) ರ ಅಡಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಟ 50 ಅಂಕಗಳು ಮತ್ತು ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಶೇ. 35 ರಷ್ಟು ಅಂಕಗಳನ್ನು ಪಡೆದು ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ.

Last Updated : Dec 13, 2024, 12:39 PM IST

ABOUT THE AUTHOR

...view details