ಕರ್ನಾಟಕ

karnataka

ETV Bharat / education-and-career

ಪಿಜಿ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ - PG MEDICAL COURSES SEAT

2024 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ಪಡೆಯಬಹುದು.

kea-declared-first-round-of-pg-medical-courses-seat-allotment-results
ಕೆಇಎ (ಸಂಗ್ರಹ ಚಿತ್ರ)

By ETV Bharat Karnataka Team

Published : Nov 27, 2024, 3:07 PM IST

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಿಜಿ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- 2024 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳು ಪಡೆಯಬಹುದಾಗಿದೆ.

ಪಿಜಿ ವೈದ್ಯಕೀಯ ಕೋರ್ಸ್ ನ ಒಟ್ಟು 3,506 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಸೀಟು ಹಂಚಿಕೆಯಾಗಿರುವವರು ನವೆಂಬರ್ 29 ರೊಳಗೆ ತಮ್ಮ ಆಯ್ಕೆಯನ್ನು ದಾಖಲಿಸಬೇಕು. ಹಂಚಿಕೆಯಾಗಿರುವ ಸೀಟು ಇಷ್ಟವಾಗಿದ್ದಲ್ಲಿ ಆಯ್ಕೆ 1 ದಾಖಲಿಸಿ ಕಾಲೇಜಿಗೆ ಪ್ರವೇಶ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಚಾಯ್ಸ್ 1 ಮತ್ತು 2 ದಾಖಲಿಸಿದವರು ಡಿಸೆಂಬರ್ 2ರೊಳಗೆ ಶುಲ್ಕ ಕಟ್ಟಬೇಕು. ಚಾಯ್ಸ್ 1 ದಾಖಲಿಸಿದವರು ಮಾತ್ರ ನವೆಂಬರ್ 28, 29, 30 ಮತ್ತು 2 ರಂದು ಕೆಇಎ ಕಚೇರಿಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಅದರ ನಂತರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಡಿಸೆಂಬರ್ 4ರೊಳಗೆ‌ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸೀಟು ಹಂಚಿಕೆ ಪಟ್ಟಿ ಸೇರಿದಂತೆ ಆಯ್ಕೆ ಕುರಿತಾದ ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು cetonline.karnataka.gov.in/kea ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ:KPSC ನೇಮಕಾತಿ; ವಯೋಮಿತಿ ಸಡಿಲಿಕೆಯೊಂದಿಗೆ ಭೂಮಾಪಕರ ಹುದ್ದೆಗೆ ಮತ್ತೊಮ್ಮೆ ಅರ್ಜಿ ಆಹ್ವಾನ

ABOUT THE AUTHOR

...view details