ಕರ್ನಾಟಕ

karnataka

ETV Bharat / education-and-career

1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

KEA Notification for Village Accountant
KEA Notification for Village Accountant

By ETV Bharat Karnataka Team

Published : Feb 23, 2024, 4:22 PM IST

ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಸಾವಿರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ (ಗ್ರಾಮ ಲೆಕ್ಕಾಧಿಕಾರಿ) ಭರ್ತಿ ಮಾಡಲಾಗಿದೆ. ಜಿಲ್ಲೆವಾರು ಹುದ್ದೆಗಳ ಕುರಿತು ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳು ಪರಿಶೀಲನೆ ನಡೆಸಬಹುದಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ, ಡಿಪ್ಲೋಮಾ ಅಥವಾ ಎರಡು ವರ್ಷದ ಐಟಿಐ ಅಥವಾ ಎರಡು ವರ್ಷದ ಜೆಒಸಿ, ಜೆಓಡಿಸಿ, ಜೆಎಲ್​ಡಿಸಿ ವಿದ್ಯಾಭ್ಯಾಸವನ್ನು ಹೊಂದಿರಬೇಕು.

ಅಧಿಸೂಚನೆ

ವೇತನ: 21,400 - 42,000 ರೂ ಮಾಸಿಕ

ವಯೋಮಿತಿ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಈ ಪರೀಕ್ಷೆ ಎರಡು ಪತ್ರಿಕೆಯನ್ನೊಳಗೊಂಡಿದ್ದು, 200 ಅಂಕಗಳಿರಲಿವೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ ಮತ್ತು ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ.

ಈ ಹುದ್ದೆಗೆ ಮಾರ್ಚ್​ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಏಪ್ರಿಲ್​ 3 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಅಂತಿಮ ದಿನಾಂಕ ಏಪ್ರಿಲ್​ 6 ಆಗಿದೆ.

ವಿಶೇಷ ಸೂಚನೆ: ಈ ಹುದ್ದೆಗಳು ಎನ್​ಪಿಎಸ್​ ಅಂದರೆ ಪಿಂಚಣಿ ರಹಿತ ಸೌಲಭ್ಯವನ್ನು ಹೊಂದಿದೆ.

ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರಗಳಿಗೆ kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನು ಓದಿ: ಭಾರತೀಯ ನೌಕಾ ಸೇನಾ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಎಸ್​​ಎಸ್​ಸಿ

ABOUT THE AUTHOR

...view details