ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ (ಕೆಪಿಎಸ್ಸಿ) ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿದ್ದ ಗ್ರೂಪ್ ಸಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿವಿಧ ಇಲಾಖೆಯಲ್ಲಿನ 76 ಗ್ರೂಪ್ ಸಿ ಹುದ್ದೆಗಳು ಸೇರಿದಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 63 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ವಿಸ್ತರಿಸಲಾಗಿದೆ.
ಈ ಹಿಂದೆ ಈ ಹುದ್ದೆಗಳಿಗೆ ಬಿಎಸ್ಸಿ, ಬಿಬಿಎ ಮತ್ತು ಬಿಇ ಪದವಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು. ಇದೀಗ ಬಿಬಿಎಂ ಮತ್ತು ಬಿ.ಟೆಕ್ ಪದವಿ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಕೆಗೆ ಅವಕಾಶ ಒದಗಿಸಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 23ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 1 ಆಗಿದೆ.
ಈ ಹುದ್ದೆಗಳ ಕುರಿತಾದ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ kpsc.kar.nic.in ಗೆ ಭೇಟಿ ನೀಡಬಹುದಾಗಿದೆ.
ಆರ್ಆರ್ಬಿ ಹುದ್ದೆಗಳು: ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿದಂತೆ ದೇಶದ ವಿವಿಧ ಪ್ರಾದೇಶಿಕ ಬ್ಯಾಂಕಿಂಗ್ ವಲಯದಲ್ಲಿನ (RRB) 9,995 ಹುದ್ದೆಗಳಿಗೂ ಕೂಡ ಐಬಿಪಿಎಸ್ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 27.
ನಿಗದಿತ ಹುದ್ದೆಗಳಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ 200 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಪದವಿ ಓದಿರುವ ಗರಿಷ್ಠ 40 ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮ್ಸ್ ಮತ್ತು ಮೇನ್ಸ್ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ibps.inಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ:ಶಿವಮೊಗ್ಗ: ಜಿಲ್ಲಾ ಸರ್ಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ