ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ನಿರ್ದೇಶಕರು ಸೇರಿದಂತೆ ಒಟ್ಟು 327 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಹುದ್ದೆ ವಿವರ:
ಇಲಾಖೆ | ಹುದ್ದೆ | ಹುದ್ದೆ ಸಂಖ್ಯೆ |
ಬಿಬಿಎಂಪಿ | ಸಹಾಯಕ ಇಂಜಿನಿಯರ್ (ಸಿವಿಲ್) | 100 |
ಜಲ ಸಂಪನ್ಮೂಲ ಇಲಾಖೆ | ಸಹಾಯಕ ಇಂಜಿನಿಯರ್ (ಸಿವಿಲ್) | 90 |
ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ | ಭೂ ದಾಖಲೆಗಳ ಸಹಾಯಕ ನಿರ್ದೇಶಕರು | 27 |
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ | ಪತ್ರಾಂಕಿತ ವ್ಯಸ್ಥಾಪಕರು | 40 |
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ | ಸಹಾಯಕ ನಿರ್ದೇಶಕರು | 23 |
ಜಲ ಸಂಪನ್ಮೂಲ ಇಲಾಖೆ | ಸಹಾಯಕ ಇಂಜಿನಿಯರ್(ಮೆಕಾನಿಕಲ್) | 10 |
ಕಾರ್ಖಾನೆ, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ | ಕಾರ್ಖಾನೆಗಳ ಸಹಾಯಕ ನಿರ್ದೇಶಕರು | 9 |
ಕಾರ್ಖಾನೆ, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ | ಬಾಯ್ಲರುಗಳ ಸಹಾಯಕ ನಿರ್ದೇಶಕರು | 3 |
ಅಂತರ್ಜಲ ನಿರ್ದೇಶನಾನಾಲಯ | ಭೂ ವಿಜ್ಞಾನಿ | 25 |
ವಿದ್ಯಾರ್ಹತೆ:ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಬಿಇ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.