ಬೆಂಗಳೂರು: ಕರ್ನಾಟಕ ಲೋಕೋಪಯೋಗಿ ಇಲಾಖೆಯಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಎ ಶ್ರೇಣಿಯ ಒಟ್ಟು 42 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ.
ಹುದ್ದೆ ವಿವರ: ಸಹಾಯಕ ಕಾರ್ಯಪಾಲಕ ಇಂಜಿನಿಯರ್- 30, ಕಲ್ಯಾಣ ಕರ್ನಾಟಕಕ್ಕೆ 12 ಹುದ್ದೆ ಮೀಸಲಿಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಾಜಿ ಅಂಡ್ ಮ್ಯಾನೇಜ್ಮೆಂಟ್ ಇಂಜಿನಿಯರಿಂಗ್ನಲ್ಲಿ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿ ಕನಿಷ್ಠ 21 ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.