ಕರ್ನಾಟಕ

karnataka

ETV Bharat / education-and-career

KPSC ನೇಮಕಾತಿ; ವಯೋಮಿತಿ ಸಡಿಲಿಕೆಯೊಂದಿಗೆ ಭೂಮಾಪಕರ ಹುದ್ದೆಗೆ ಮತ್ತೊಮ್ಮೆ ಅರ್ಜಿ ಆಹ್ವಾನ

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ 'ಗ್ರೂಪ್​ ಸಿ'ಯ 364 ಹುದ್ದೆಗಳಿಗೆ ಇದೀಗ ಮತ್ತೊಮ್ಮೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ.

KPSC Renotification for 364 Land Surveyor Posts
ಕೆಪಿಎಸ್​ಸಿ (ಸಂಗ್ರಹ ಚಿತ್ರ)

By ETV Bharat Karnataka Team

Published : Nov 25, 2024, 3:05 PM IST

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ದಿಂದ ಮೂರು ವರ್ಷದ ವಯೋಮಿತಿ ಸಡಿಲಿಕೆಯೊಂದಿಗೆ ಮತ್ತೊಮ್ಮೆ ಭೂ ಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ 'ಗ್ರೂಪ್​ ಸಿ'ಯ 364 ಹುದ್ದೆಗಳಿಗೆ ಇದೀಗ ಮತ್ತೊಮ್ಮೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಪರೀಕ್ಷಾ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುವುದು.

ಹುದ್ದೆಗಳ ವಿವರ: ಒಟ್ಟು 364 ಹುದ್ದೆಗಳಲ್ಲಿ ಹೈದರಾಬಾದ್​ ಕರ್ನಾಟಕಕ್ಕೆ 100 ಮತ್ತು ಉಳಿಕೆ ಮೂಲ ವೃಂದದಲ್ಲಿ 264 ಹುದ್ದೆಗಳಿವೆ.

ತಿದ್ದುಪಡಿ ಅಧಿಸೂಚನೆ (ಕೆಪಿಎಸ್​ಸಿ)

ವಿದ್ಯಾರ್ಹತೆ:ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಬಿಇ ಅಥವಾ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಅಥವಾ ಲ್ಯಾಂಡ್​ ಅಂಡ್​​ ಸಿಟಿ ಸರ್ವೇ ಪದವಿ ಪೂರ್ವ ಡಿಪ್ಲೊಮಾ ಅಥವಾ ಐಟಿಐ ಇನ್​ ಸರ್ವೆ ಟ್ರೇಡ್​ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 38 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3, ಪ. ಜಾ, ಪ. ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಮಾಸಿಕ 23,500 - 47,650 ರೂ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಮತ್ತ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾದಾರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಈ ಹುದ್ದೆಗೆ ನವೆಂಬರ್​ 25ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಡಿಸೆಂಬರ್​ 9 ಆಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ನ. 26ರಿಂದ ಕೊಪ್ಪಳದಲ್ಲಿ ಅಗ್ನಿವೀರ್​ ನೇಮಕಾತಿ; ಇಲ್ಲಿದೆ ಸಂಪೂರ್ಣ ವಿವರ

ABOUT THE AUTHOR

...view details