ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಈ ಹಿಂದೆ (2020ರಲ್ಲಿ) ಕೋವಿಡ್ ಸಂದರ್ಭದಲ್ಲಿ ಹೊರಡಿಸಿದ್ದ 3,745 ಚಾಲಕ ಕಂ ನಿರ್ವಾಹಕ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ. ಇದರಂತೆ ಹುದ್ದೆಗಳ ಸಂಖ್ಯೆಯನ್ನು 2,000ಕ್ಕೆ ಸೀಮಿತಗೊಳಿಸಿದೆ. ಈ ಹಿಂದೆ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸುವುದಾಗಿ ನಿಗಮ ತಿಳಿಸಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಾರ್ಚ್ 6ರಿಂದ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಮಾರ್ಚ್ 3ರಿಂದ ನಿಗಮದ ಅಧಿಕೃತ ವೆಬ್‌ಸೈಟ್ ksrtcjobs.karnataka.gov.inರಲ್ಲಿ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಸೂಚಿಸಲಾಗಿದೆ.