ಕರ್ನಾಟಕ

karnataka

ETV Bharat / education-and-career

ಶಿವಮೊಗ್ಗ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ - ಶಿವಮೊಗ್ಗ ಜಿಲ್ಲಾ ಪಂಚಾಯತಿ ನೇಮಕಾತಿ

ಶಿವಮೊಗ್ಗದ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್​ಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಇಲ್ಲಿದೆ.

library supervioser job in shimoga Zilla panchayat
library supervioser job in shimoga Zilla panchayat

By ETV Bharat Karnataka Team

Published : Feb 5, 2024, 5:29 PM IST

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಪಂಜಾಯತ್​​ ವತಿಯಿಂದ ಗ್ರಂಥಾಲಯ ಮತ್ತು ಮೇಲ್ವಿಚಾರಕರ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಒಟ್ಟ 14 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಈ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ವಿವರಗಳು ಇಲ್ಲಿದೆ.

ಅಧಿಸೂಚನೆ

ಹುದ್ದೆ ವಿವರ: ಶಿವಮೊಗ್ಗ ಜಿಲ್ಲಾ ಪಂಚಾಯತ್​ನಿಂದ ಈ ತಾಲೂಕುಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿ ಮಾಡಲಾಗುವುದು.

  • ಶಿಕಾರಿಪುರ -5
  • ಸೊರಬ - 2
  • ಭದ್ರಾವತಿ - 2
  • ತೀರ್ಥಹಳ್ಳಿ - 1
  • ಹೊಸನಗರ - 2
  • ಸಾಗರ - 1
  • ಶಿವಮೊಗ್ಗ -1

ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು ಮೂರು ತಿಂಗಳ ಕಂಪ್ಯೂಟರ್​ ತರಬೇತಿ ಕೋರ್ಸ್​ ಅನ್ನು ಮಾಡಿರಬೇಕು.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವೇತನ: ಮಾಸಿಕ 15,196 ರೂ. ಮಾಸಿಕ ವೇತನ ನಿಗದಿಸಲಾಗಿದೆ. ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸಿರುವ ವ್ಯತ್ಯಯವಾಗುವ ತುಟಿ ಭತ್ಯೆಯನ್ನು ಪಾವತಿಸಲಾಗುವುದು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆಫ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್​​, ಶಿವಮೊಗ್ಗ ಹುದ್ದೆ ಖಾಲಿ ಇರುವ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್​ಗಳಲ್ಲಿ ನಿಗದಿತ ಅರ್ಜಿಗಳನ್ನು ಪಡೆದು, ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಫೆಬ್ರವರಿ 5ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 23 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ shimoga.nic.inಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ 9901753914 ಈ ದೂರಾವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಇದನ್ನೂ ಓದಿ:ವಿಜಯಪುರದಲ್ಲಿ ಪೌರ ಕಾರ್ಮಿಕ ಹುದ್ದೆ ನೇಮಕಾತಿ: 93 ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details