ಕರ್ನಾಟಕ

karnataka

ETV Bharat / education-and-career

ಬೆಂಗಳೂರು ನಗರ ಗ್ರಾಮ ಪಂಚಾಯತ್​​ನಲ್ಲಿ ನೇಮಕಾತಿ; ಇಲ್ಲಿದೆ ಹುದ್ದೆ ವಿವರ - Library Supervisor job in Bengaluru

ಪಿಯುಸಿ ವಿದ್ಯಾರ್ಹತೆ ಅಥವಾ ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರವನ್ನು ಹೊಂದಿರಬೇಕು

Library Supervisor job in Bengaluru Urban Gram Panchayat
uದ್ಯೋಗ ಮಾಹಿತಿ (ಈಟಿವಿ ಭಾರತ್​​​)

By ETV Bharat Karnataka Team

Published : Jul 27, 2024, 2:15 PM IST

ಹೈದರಾಬಾದ್​: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್​ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರು ತಾಲೂಕುಗಳಲ್ಲಿನ ಐದು ಪಂಚಾಯತಿಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ (ಬೆಂಗಳೂರು ನಗರ ಗ್ರಾಮ ಪಂಚಾಯತ್​)

ಹುದ್ದೆ ವಿವರ: ಆರು ತಾಲೂಕಿನಲ್ಲಿರುವ ಗ್ರಾಮ ಪಂಚಾಯತ್​ನಲ್ಲಿ ಈ ನೇಮಕಾತಿ ನಡೆಯಲಿದೆ.

  • ಯಲಹಂಕ - 1
  • ಬೆಂಗಳೂರು ಉತ್ತರ- 1
  • ಬೆಂಗಳೂರು ಪೂರ್ವ 1
  • ಯಲಹಂಕ - 1
  • ಬೆಂಗಳೂರು ದಕ್ಷಿಣ - 2

ವಿದ್ಯಾರ್ಹತೆ:ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ:ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ಕನಿಷ್ಠ ವೇತನ 15,196.72 ರೂ ಮಾಸಿಕ

ಅರ್ಜಿ ಸಲ್ಲಿಕೆ:ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅದಕ್ಕೆ ಅಗತ್ಯ ಪ್ರಮಾಣಗಳನ್ನು ಲಗತ್ತಿಸಬೇಕು. ಅಭ್ಯರ್ಥಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಖುದ್ದು ಸಲ್ಲಿಕೆ ಮಾಡಬೆಕು. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.

ಈ ಹುದ್ದೆಗೆ ಜುಲೈ 25 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್​ 13 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ zpbengaluruurban.karnataka.gov.in ಇಲ್ಲಿಗೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು 080-26716169 ಸಂಪರ್ಕಿಸಬಹುದು.

ಇದನ್ನೂ ಓದಿ: ನಿಮ್ಹಾನ್ಸ್​ನಲ್ಲಿ ಡೇಟಾ ಎಂಟ್ರಿ ಆಪರೇಟರ್​ ಹುದ್ದೆಗೆ ವಾಕ್​ ಇನ್​ ಸಂದರ್ಶನ

ABOUT THE AUTHOR

...view details