ಕರ್ನಾಟಕ

karnataka

ETV Bharat / education-and-career

ಕೊಪ್ಪಳ ಗ್ರಾಮ ಪಂಚಾಯಿತಿಯಲ್ಲಿದೆ ಉದ್ಯೋಗಾವಕಾಶ: ಪಿಯುಸಿ ವಿದ್ಯಾರ್ಹತೆ - Koppal gram panchayat

ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಮಾಹಿತಿ ಇಲ್ಲಿದೆ

library-supervisor-recruitment-by-koppal-gram-panchayat
library-supervisor-recruitment-by-koppal-gram-panchayat

By ETV Bharat Karnataka Team

Published : Mar 9, 2024, 3:44 PM IST

ಬೆಂಗಳೂರು: ಕೊಪ್ಪಳ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ

ಹುದ್ದೆಗಳ ವಿವರ: ಈ ತಾಲೂಕುಗಳಲ್ಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.

  • ಕುಷ್ಟಗಿ - 8
  • ಕೊಪ್ಪಳ - 4
  • ಗಂಗಾವತಿ - 2
  • ಯಲಬುರ್ಗಾ - 3
  • ಕುಕನೂರು - 1
  • ಕನಕಗಿರಿ -2
  • ಕಾರಟಗಿ -1

ವಿದ್ಯಾರ್ಹತೆ: ಪಿಯುಸಿ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷಗಳ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಆಯ್ಕೆ.

ಅರ್ಜಿ ಸಲ್ಲಿಕೆ:ಅಭ್ಯರ್ಥಿಗಳು ಜಿಲ್ಲಾಡಳಿತದ ವೆಬ್​ಸೈಟ್​ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಬೇಕು. ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಈ ಅರ್ಜಿಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಅವಧಿಗೆ ಮುನ್ನ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಕೆ ವಿಳಾಸ: ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್​​, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್​ ಕೊಪ್ಪ: ಈ ಹುದ್ದೆಗೆ ಮಾರ್ಚ್​ 4 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 3 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು ಜಿಲ್ಲಾಡಳಿತದ ಅಧಿಕೃತ ಜಾಲತಾಣವಾಗಿರುವ koppal.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಬಿಇಎಲ್​ನಲ್ಲಿ ಸಹಾಯಕ ಇಂಜಿನಿಯರ್​ ಹುದ್ದೆ:ಭಾರತ್​ ಎಲೆಕ್ಟ್ರಾನಿಕ್ಸ್​​ ಲಿಮಿಟೆಡ್​ನಲ್ಲಿ 24 ಹಿರಿಯ ಸಹಾಯಕ ಇಂಜಿನಿಯರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶಾಖಪಟ್ಟಣಂ, ಕಾರವಾರ, ಕೊಚ್ಚಿ, ಗುವಾಹಟಿ ಕಚೇರಿಗೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಗರಿಷ್ಠ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಬಿಇಎಲ್​ ವೆಬ್​ಸೈಟ್​ನಲ್ಲಿ ಸಿಗುವ ನಿಗದಿತ ಅರ್ಜಿ ತುಂಬಿ, ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕಿದೆ.

ಅಸಿಸ್ಟೆಂಟ್​ ಮ್ಯಾನೇಜರ್​​, ಎಚ್​ಆರ್​​, ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​​, ಮಿಲಿಟರಿ ಕಮ್ಯೂನಿಕೇಷನ್​ ಮತ್ತು ಎನ್​ಡಬ್ಲ್ಯೂಸಿಎಸ್​-ಎಸ್​ಬಿಯು, ಜಾಲಹಳ್ಳಿ ಪೋಸ್ಟ್​, ಬೆಂಗಳೂರು - 560013.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೆಯ ದಿನ ಮಾರ್ಚ್​​ 20. ಹೆಚ್ಚಿನ ಮಾಹಿತಿಗೆ bel-india.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ:ಬಿಡಿಎಯಲ್ಲಿ ಉದ್ಯೋಗಾವಕಾಶ: ಎಫ್​ಡಿಎ, ಎಸ್​ಡಿಎ ಹುದ್ದೆಗಳ ಭರ್ತಿಗೆ KEA ಅಧಿಸೂಚನೆ

ABOUT THE AUTHOR

...view details