ಕರ್ನಾಟಕ

karnataka

ETV Bharat / education-and-career

ಚಿಕ್ಕಬಳ್ಳಾಪುರದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟ - Chikkaballapura Zilla Panchayat - CHIKKABALLAPURA ZILLA PANCHAYAT

ಒಟ್ಟು 21 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಜಿಲ್ಲೆ ಮತ್ತು ತಾಲೂಕಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Library Supervisors job Recruitment by Chikkaballapura Zilla Panchayat
ಸಾಂದರ್ಭಿಕ ಚಿತ್ರ (ಸಂಗ್ರಹ ಚಿತ್ರ)

By ETV Bharat Karnataka Team

Published : Sep 5, 2024, 1:54 PM IST

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ:ಒಟ್ಟು 21 ಹುದ್ದೆಗಳನ್ನು ಈ ಕೆಳಗಿನ ತಾಲೂಕಿನಲ್ಲಿ ಭರ್ತಿ ಮಾಡಲಾಗುವುದು.

  • ಬಾಗೇಪಲ್ಲಿ - 1
  • ಗುಡಿಬಂಡೆ - 1
  • ಚೇಳೂರು - 4
  • ಚಿಂತಾಮಣಿ- 4
  • ಚಿಕ್ಕಬಳ್ಳಾಪುರ- 4
  • ಶಿಡ್ಲಘಟ್ಟ- 3
  • ಮಂಚೇನಹಳ್ಳಿ - 2
  • ಗೌರಿಬಿದನೂರು -2
    ಅಧಿಸೂಚನೆ (ಚಿಕ್ಕಬಳ್ಳಾಪುರ ಜಿಲ್ಲಾಡಳಿತ)

ವಿದ್ಯಾರ್ಹತೆ:ಪಿಯುಸಿ ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವೇತನ: ಗ್ರಾಮ ಪಂಚಾಯತ್​ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ಸರ್ಕಾರ ನಿಗದಿಸಿರುವ ಗೌರವ ಸಂಭಾವನೆ.

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 35 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ. ವಿಶೇಷಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 21. ಈ ಕುರಿತ ಹೆಚ್ಚಿನ ಮಾಹಿತಿಗೆchikkaballapur.nic.in ಇಲ್ಲಿಗೆ ಭೇಟಿ ನೀಡಿ

ಇದನ್ನೂ ಓದಿ: ಪಂಚಾಯತ್​ ರಾಜ್​ನಲ್ಲಿ ಪದವಿ ಮಾಡಿದ್ದೀರಾ? ತಿಂಗಳಿಗೆ 60 ಸಾವಿರ ರೂಪಾಯಿ ವೇತನ!

ABOUT THE AUTHOR

...view details