ಬೆಂಗಳೂರು: ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಈ ನೇಮಕಾತಿ ನಡೆಯಲಿದೆ. ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ : ಒಟ್ಟ 110 ಸ್ಥಳೀಯ ಬ್ಯಾಂಕ್ ಅಧಿಕಾರಿಗಳು
ಅಧಿಸೂಚನೆ (Punjab and Sind Bank Recruitment) ಯಾವ ರಾಜ್ಯದಲ್ಲಿ ಎಷ್ಟು ಹುದ್ದೆ ನೇಮಕಾತಿ
- ಅರುಣಾಚಲ ಪ್ರದೇಶ- 5
- ಅಸ್ಸಾಂ - 10
- ಗುಜರಾತ್ - 30
- ಕರ್ನಾಟಕ -10
- ಮಹಾರಾಷ್ಟ್ರ - 30
- ಪಂಜಾಬ್ - 25
ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 850 ರೂ. ಹಾಗೂ ಪ.ಜಾ, ಪ.ಪಂ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಈ ಹುದ್ದೆಗೆ ಮಾಸಿಕ 48,480 ರೂ. ನಿಂದ 85,920 ರೂ. ವೇತನ ನಿಗದಿಸಲಾಗಿದ್ದು, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆ ಆಯ್ಕೆ ನಡೆಯಲಿದೆ.
ಈ ಹುದ್ದೆಗೆ ಫೆಬ್ರವರಿ 7ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನ ಫೆಬ್ರವರಿ 28 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ punjabandsindbank.co.in ಇಲ್ಲಿ ಭೇಟಿ ಮಾಡಿ.
ಇದನ್ನೂ ಓದಿ: ಕೊಡಗು ಜಿಲ್ಲಾ ಪಂಚಾಯತ್ ನೇಮಕಾತಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅಧಿಸೂಚನೆ ಪ್ರಕಟ
ಇದನ್ನೂ ಓದಿ:ಬೆಸ್ಕಾಂನಲ್ಲಿ 510 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ