ಕರ್ನಾಟಕ

karnataka

ETV Bharat / education-and-career

ಪದವಿ ಆದವರಿಗೆ ಇಂಡಿಯನ್​ ಬ್ಯಾಂಕ್​ನಲ್ಲಿದೆ ಉದ್ಯೋಗವಕಾಶ - Indian Bank Recruitment - INDIAN BANK RECRUITMENT

ಪದವಿಯನ್ನು ಪೂರ್ಣಗೊಳಿಸಿರುವವರಿಗೆ ಇಲ್ಲೊಂದು ಉದ್ಯೋಗಾವಕಾಶವಿದೆ. ಉದ್ಯೋಗಾಕಾಂಕ್ಷಿಗಳಿಗೆ ಕನ್ನಡ ಬರೆಯಲು, ಓದಲು, ಮಾತನಾಡಲು ತಿಳಿದಿರಬೇಕು.

Local Bank Officer recruitment for Indian Bank
ಉದ್ಯೋಗ ನೇಮಕಾತಿ (ಸಂಗ್ರಹ ಚಿತ್ರ)

By ETV Bharat Karnataka Team

Published : Aug 17, 2024, 3:17 PM IST

ಬೆಂಗಳೂರು: ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್​ ಆಗಿರುವ ಇಂಡಿಯನ್​ ಬ್ಯಾಂಕ್​ನಲ್ಲಿ ಸ್ಥಳೀಯ ಬ್ಯಾಂಕ್​ ಅಧಿಕಾರಿ (ಲೋಕಲ್​ ಬ್ಯಾಂಕ್​ ಅಫೀಸರ್​) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಸಲಾಗಿದೆ. ಕರ್ನಾಟಕ, ಸೇರಿದಂತೆ ಐದು ರಾಜ್ಯಗಳಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಒಟ್ಟು 300 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ 35 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿ ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದ ಅಡಿಯಲ್ಲಿ ಪದವಿಯನ್ನು ಪೂರ್ಣಗೊಳಿಸಿದರಬೇಕು. ಕರ್ನಾಟಕ ಹುದ್ದೆಗಳಿಗೆ ಅರ್ಜಿ ಬಯಸುವ ಅಭ್ಯರ್ಥಿಗಳು ಕನ್ನಡ ಬರೆಯಲು, ಓದಲು, ಮಾತನಾಡಲು ತಿಳಿದಿರಬೇಕು.

ವಿದ್ಯಾರ್ಹತೆ: ಅಭ್ಯರ್ಥಿ ಕನಿಷ್ಠ 20, ಗರಿಷ್ಠ 30 ವರ್ಷ ವಯೋಮಿತಿ ಇರಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 175ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ಇದೆ.

ಈ ಹುದ್ದೆಗಳಿಗೆ ಆಗಸ್ಟ್​ 13 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 2 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು indianbank.inಗೆ ಭೇಟಿ ನೀಡಬಹುದಾಗಿದೆ.

ಅಂಗನವಾಡಿ ನೇಮಕಾತಿ:ಬಳ್ಳಾರಿ ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 22 ಅಂಗನವಾಡಿ ಕಾರ್ಯಕರ್ತರು, 119 ಅಂಗನಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಧಿಸೂಚನೆ (ಇಂಡಿಯಾ ಬ್ಯಾಂಕ್​)

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 19 ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್​ಲೈನ್​ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕ ಇಲ್ಲ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳುhttp://karnemakaone.kar.nic.in/abcd/ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಆಯ್ಕೆ ಮಾಡಿ, ಬಳಿಕ ಯಾವ ಹುದ್ದೆ ಎಂಬುದನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಸಲ್ಲಿಸಬೇಕಿದೆ.

ಇದನ್ನೂ ಓದಿ: ವೈದ್ಯಕೀಯ ಕೋರ್ಸ್​​ಗಳ ನೋಂದಣಿಗೆ ಕೆಇಎ ಅಂತಿಮ ಅವಕಾಶ

ABOUT THE AUTHOR

...view details