ಬೆಂಗಳೂರು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿ ವಿಭಾಗದಲ್ಲಿ ಖಾಲಿ ಇರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯ ನಿರ್ವಹಣೆಗೆ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆ ವಿವರ: ಜಿಲ್ಲಾ ಎಂಐಎಸ್ ಸಮಾಲೋಕಚರು
ವಿದ್ಯಾರ್ಹತೆ: ಅಭ್ಯರ್ಥಿಗಳು ಸಂಖ್ಯಾಶಾಸ್ತ್ರ, ಎಂಸಿಎ, ಎಂಎಸ್ಸಿ ಕಂಪ್ಯೂಟರ್ ಸೈನ್ಸ್, ಬಿಇ ಕಂಪ್ಯೂಟರ್ ಸೈನ್ಸ್ ಪದವಿಯನ್ನು ಪಡೆದಿರಬೇಕು.
ಅಧಿಸೂಚನೆ (ಶಿವಮೊಗ್ಗ ಜಿಲ್ಲಾ ಜಾಲತಾಣ) ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗೆ ಅಕ್ಟೋಬರ್ 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 1 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು shimoga.nic.in ಭೇಟಿ ನೀಡಬಹುದು.
ಕೆಹೆಚ್ಪಿಟಿಯಲ್ಲಿ ನರ್ಸಿಂಗ್ ಹುದ್ದೆ:
ಕರ್ನಾಟಕ ಹೆಲ್ತ್ ಪ್ರೊಮೊಷನ್ ಟ್ರಸ್ಟ್ನಲ್ಲಿ ಖಾಲಿ ಇರುವ 8 ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಿಎಸ್ಸಿ, ಎಂಎಸ್ಸಿ ನರ್ಸಿಂಗ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 17ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್ 28 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ khpt.orgಭೇಟಿ ನೀಡಿ.
ಇದನ್ನೂ ಓದಿ: ಮಂಡ್ಯ ಟು ಇಂಡಿಯಾ ಬೃಹತ್ ಉದ್ಯೋಗ ಮೇಳ ಯಶಸ್ವಿ: ಪ್ರಮಾಣಪತ್ರ ವಿತರಿಸಿದ ಹೆಚ್ಡಿಕೆ