ಬೆಂಗಳೂರು: ಭಾರತೀಯ ಕೋಸ್ಟ್ ಗಾರ್ಡ್ನಲ್ಲಿ ನಾವಿಕ ಮತ್ತು ಯಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 320 ಹುದ್ದೆಗಳಿವೆ. ಆಯ್ಕೆ ಪ್ರಕ್ರಿಯೆ, ನೇಮಕಾತಿ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
- ನಾವಿಕ (ಜನರಲ್ ಡ್ಯೂಟಿ)- 260
- ಯಾಂತ್ರಿಕ- 60
ವಿದ್ಯಾರ್ಹತೆ:ಪಿಯುಸಿ ಉತ್ತೀರ್ಣರಾಗಿರಬೇಕು.
ವೇತನ: ನಾವಿಕ ಹುದ್ದೆಗೆ ಮಾಸಿಕ 21,700 ರೂ, ಯಾಂತ್ರಿಕ ಹುದ್ದೆಗೆ 29,200 ರೂ.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 22 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಪರೀಕ್ಷೆ, ಅಸೆಸ್ಮೆಂಟ್ ಮತ್ತು ಅಡಾಪ್ಟಿಬಿಲಿಪಿ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ. ಜೂನ್ 13ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 3 ಕಡೇಯ ದಿನ. ಈ ಕುರಿತು ಹೆಚ್ಚಿನ ಮಾಹಿತಿಗೆ indiancoastguard.gov.in ಭೇಟಿ ನೀಡಿ.
ಅಧಿಸೂಚನೆ (ಭಾರತೀಯ ಕೋಸ್ಟ್ ಗಾರ್ಡ್) ಬಿಎಸ್ಎಫ್ ನೇಮಕಾತಿ:ಗಡಿ ಭದ್ರತಾ ಪಡೆಯಲ್ಲಿರುವ 1526 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 243 ಸಹಾಯಕ ಸಬ್ ಇನ್ಸ್ಪೆಕ್ಟರ್ (ಮಿನಿಸ್ಟ್ರಿಯಲ್) ಮತ್ತು 1283 ಹೆಡ್ ಕಾನ್ಸ್ಟೇಬಲ್ (ಕ್ಲರ್ಕ್) ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಪಿಯುಸಿ ಉತ್ತೀರ್ಣರಾಗಿದ್ದು, ಟೈಪಿಂಗ್ ಅನುಭವ ಹೊಂದಿದ್ದವರು ಅರ್ಜಿ ಹಾಕಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಜೂನ್ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 8 ಕಡೇಯ ದಿನ. ಈ ಕುರಿತು ಹೆಚ್ಚಿನ ಮಾಹಿತಿಗೆ rectt.bsf.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ; 304 ಹುದ್ದೆಗಳ ವಿವರ ಇಲ್ಲಿದೆ